ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಜಿರೆ: ಕಡಿರುದ್ಯಾವರ ಕಾಡಿನಿಂದ ನಾಡಿಗೆ ಬಂದ ಆನೆಗಳು

Last Updated 4 ನವೆಂಬರ್ 2020, 14:47 IST
ಅಕ್ಷರ ಗಾತ್ರ

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಕಡಿರುದ್ಯಾವರ ಗ್ರಾಮದ ನಿವಾಸಿ ಡೀಕಯ್ಯ ಗೌಡರ ತೋಟಕ್ಕೆ ಗುರುವಾರ ರಾತ್ರಿ ಕಾಡಿನಿಂದ ಬಂದ ಆನೆಗಳ ಹಿಂಡು ಕೃಷಿಗೆ ಹಾನಿ ಮಾಡಿವೆ.

ಆನೆಗಳು ಆಹಾರ ಹುಡುಕಿಕೊಂಡು ತೋಟಕ್ಕೆ ಬಂದಿದ್ದು, ಅವು ಮರಳಿ ಕಾಡಿಗೆ ಹೋಗುವಾಗ ಮರಿಯಾನೆ ಒಂದು ತೋಟದಲ್ಲಿ ಉಳಿದಿದೆ. ತೋಟದ ಮಾಲಕ ಶುಕ್ರವಾರ ಬೆಳಿಗ್ಗೆ ತೋಟಕ್ಕೆ ಹೋದಾಗ ವಿಷಯ ಗೊತ್ತಾಗಿದ್ದು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಅರಣ್ಯ ಇಲಾಖೆಯ ಅಧಿಕಾರಿ ತ್ಯಾಗರಾಜ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಎರಡು ತಿಂಗಳು ಪ್ರಾಯದ ಸಣ್ಣ ಮರಿಯಾಗಿರುವುದರಿಂದ ಮತ್ತೆ ಆನೆಗಳ ಹಿಂಡು ಬಂದು ಜೊತೆಯಲ್ಲಿ ಮರಿಯನ್ನು ಕಾಡಿಗೆ ಕರೆದುಕೊಂಡು ಹೋಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT