ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮ: ಪ್ರಚಾರಕ್ಕೆ ಬ್ಯಾನರ್, ಕರಪತ್ರ ಬಳಕೆ

ಗುರುವಾರ , ಜೂನ್ 27, 2019
26 °C
ಇಂಗ್ಲಿಷ್ ಮಾಧ್ಯಮ ಬೋಧನೆಗೆ ಉತ್ತಮ ಪ್ರತಿಕ್ರಿಯೆ

ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮ: ಪ್ರಚಾರಕ್ಕೆ ಬ್ಯಾನರ್, ಕರಪತ್ರ ಬಳಕೆ

Published:
Updated:
Prajavani

ಮುಂಡಗೋಡ: ಸರ್ಕಾರಿ ಶಾಲೆಗಳಲ್ಲಿಯೂ ಒಂದನೇ ತರಗತಿಯಿಂದ ಇಂಗ್ಲಿಷ್ ಮಾಧ್ಯಮಕ್ಕೆ ಚಾಲನೆ ನೀಡಿರುವುದಕ್ಕೆ ಪಾಲಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ತಾಲ್ಲೂಕಿನ ಒಟ್ಟು ಮೂರು ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಬೋಧನೆಗೆ ಅನುಮತಿ ನೀಡಲಾಗಿದೆ.

ಇಲ್ಲಿನ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಗಾಗಲೇ 15 ಮಕ್ಕಳು ಇಂಗ್ಲಿಷ್ ಮಾಧ್ಯಮ ಒಂದನೇ ತರಗತಿಗೆ ಸೇರಲು ಹೆಸರು ನೋಂದಾಯಿಸಿದ್ದಾರೆ. ಖಾಸಗಿ ಶಾಲೆಗಳಲ್ಲಿ ಯುಕೆಜಿ ಕಲಿತಿರುವ ಕೆಲವು ವಿದ್ಯಾರ್ಥಿಗಳು ಕೂಡ ಸರ್ಕಾರಿ ಶಾಲೆಗಳತ್ತ ಮುಖ ಮಾಡಿದ್ದಾರೆ. ಇಂಗ್ಲಿಷ್ ಮಾಧ್ಯಮ ಬೋಧನೆ ಇನ್ನೂ ಅಷ್ಟೊಂದು ಪ್ರಚಾರ ಆಗದಿದ್ದರೂ ಪೋಷಕರು ಆಸಕ್ತಿ ತೋರುತ್ತಿದ್ದಾರೆ. 

‘ನೆಮ್ಮದಿಯ ಜೀವನ ನಿಮ್ಮದಾಗಲಿ’: ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭವಾಗಿರುವ ಬಗ್ಗೆ ತಿಳಿಸಲು ಕರಪತ್ರಗಳನ್ನು ಹಂಚಲಾಗುತ್ತಿದೆ. ಗ್ರಾಮದ ಪ್ರಮುಖ ಓಣಿಗಳು ಹಾಗೂ ಶಾಲಾ ಆವರಣದಲ್ಲಿ ಬ್ಯಾನರ್‌ ಅಳವಡಿಸಲಾಗಿದೆ.

‘ನಿಮ್ಮೂರಿನ, ನಿಮ್ಮ ಮನೆಯ ಹತ್ತಿರವಿರುವ ಸರ್ಕಾರಿ ಶಾಲೆಯಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷ್ ಮಾಧ್ಯಮ ಮಂಜೂರಿಯಾಗಿದ್ದು, ಪ್ರವೇಶ ಆರಂಭವಾಗಿದೆ. ಬೇರೆ ಶಾಲೆಗೆ ಮಕ್ಕಳನ್ನು ಸೇರಿಸಿ ಹಣ ಖರ್ಚು ಮಾಡಿ ಪರಿತಪಿಸಬೇಡಿ. ನಿಮ್ಮೂರಿನ ಶಾಲೆಗೆ ಮಕ್ಕಳನ್ನು ಸೇರಿಸಿ ನೆಮ್ಮದಿಯ ಜೀವನ ನಿಮ್ಮದಾಗಲಿ’ ಎಂದು ಕರಪತ್ರದಲ್ಲಿ ತಿಳಿಸಲಾಗಿದೆ. ಇದರ ಜೊತೆಗೆ ಸರ್ಕಾರಿ ಶಾಲೆಯಲ್ಲಿರುವ ಸೌಕರ್ಯಗಳು, ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ವಿವರವಾಗಿ ತಿಳಿಸುವ ಪ್ರಯತ್ನ ಮಾಡಲಾಗಿದೆ.

‘ಈಗಾಗಲೇ 15 ಮಕ್ಕಳು ಇಂಗ್ಲಿಷ್  ಮಾಧ್ಯಮ ತರಗತಿಗೆ ಹೆಸರು ನೋಂದಾಯಿಸಿದ್ದಾರೆ. ಖಾಸಗಿ ಶಾಲೆಯಲ್ಲಿ ಯುಕೆಜಿ ಕಲಿತ ಮಕ್ಕಳೂ ಸರ್ಕಾರಿ ಶಾಲೆಯಲ್ಲಿ ಹೆಸರು ದಾಖಲಿಸಿದ್ದಾರೆ. ಪಾಲಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ’ ಎಂದು ಶಾಸಕರ ಮಾದರಿ ಶಾಲೆಯ ಮುಖ್ಯಶಿಕ್ಷಕ ವಿನೋದ ನಾಯಕ ಹೇಳಿದರು.

‘ಮೇ 25ರಂದು ಶಾಲಾಭಿವೃದ್ಧಿ ಸಮಿತಿ ಸದಸ್ಯರ ಸಭೆ ನಡೆಸಿ, ಇಂಗ್ಲಿಷ್ ಮಾಧ್ಯಮ ಕುರಿತು ಚರ್ಚೆ ನಡೆಸಲಾಗುವುದು. ಈಗಾಗಲೇ ಕರಪತ್ರ, ಬ್ಯಾನರ್‌ ಮಾಡಿಸಿ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ. ಸದ್ಯ 10 ಮಕ್ಕಳ ಪಾಲಕರು ಹೆಸರು ನೋಂದಾಯಿಸುವುದಾಗಿ ತಿಳಿಸಿದ್ದಾರೆ’ ಎಂದು ಚಿಗಳ್ಳಿ ಮಾದರಿ ಶಾಲೆಯ ಮುಖ್ಯ ಶಿಕ್ಷಕಿ ನಾಗರತ್ನಾ ರಾಯ್ಕರ ಹೇಳಿದರು.

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !