ಮಂಗಳವಾರ, ಏಪ್ರಿಲ್ 7, 2020
19 °C

ಬನವಾಸಿ: ಯಾತ್ರಾರ್ಥಿಗಳ ಪ್ರವೇಶ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ಪುರಾತತ್ವ ಇಲಾಖೆಯ ಆದೇಶದನ್ವಯ ಕೊರೊನಾ ವೈರಸ್‌ ನಿಯಂತ್ರಿಸುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ, ತಾಲ್ಲೂಕಿನ ಬನವಾಸಿಯ ಐತಿಹಾಸಿಕ ಮಧುಕೇಶ್ವರ ದೇವಾಲಯಕ್ಕೆ ಮಾ.31ರವರೆಗೆ ಯಾತ್ರಾರ್ಥಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಜಶೇಖರ ಒಡೆಯರ್ ತಿಳಿಸಿದ್ದಾರೆ.

ತಲ್ಲಣ ಸೃಷ್ಟಿಸಿರುವ ಕೊರೊನಾ ವೈರಸ್‌ನಿಂದ ಜನರಿಗೆ ಯಾವುದೇ ತೊಂದರೆ ಆಗದಂತೆ, ವಿಶ್ವದ ಜನಸಂಕುಲವನ್ನು ರಕ್ಷಿಸುವಂತೆ ಮಧುಕೇಶ್ವರ ದೇವರಿಗೆ ಪೂಜೆ ಸಲ್ಲಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆರೋಗ್ಯ ಸಚಿವ ಶ್ರೀರಾಮುಲು, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಹರೀಶಕುಮಾರ್ ಅವರಿಗೆ ಪೂಜೆಯ ಪ್ರಸಾದ ಕಳುಹಿಸಲಾಗಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಡಾ.ಜಿ.ಎ.ಹೆಗಡೆ ಸೋಂದಾ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು