ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಸಿ: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಜ್ಜುಗೊಂಡ ಕೇಂದ್ರಗಳು

ಕೆಲವೆಡೆ ಅಣಕು ಪರೀಕ್ಷೆ; ಕೊಠಡಿಗಳಿಗೆ ಸ್ಯಾನಿಟೈಸ್ ಸಿಂಪಡಣೆ:
Last Updated 16 ಜುಲೈ 2021, 15:29 IST
ಅಕ್ಷರ ಗಾತ್ರ

ಶಿರಸಿ: ಜು.19 ಮತ್ತು 22ರಂದು ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಶಿರಸಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯ ಏಳು ತಾಲ್ಲೂಕುಗಳಲ್ಲಿ ಸಿದ್ಧತೆಗಳು ಪೂರ್ಣಗೊಂಡಿವೆ. ಸುಗಮ ಪರೀಕ್ಷೆಗೆ ಹಲವು ಕಡೆಗಳಲ್ಲಿ ಅಣಕು ಪರೀಕ್ಷೆ ನಡೆಸಲಾಗಿದೆ.

ನಗರ ಹಾಗೂ ಗ್ರಾಮೀಣ ಭಾಗಗಳ 61 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಒಟ್ಟು 10,842 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 2 ಕೇಂದ್ರಗಳನ್ನು ಖಾಸಗಿ ಅಭ್ಯರ್ಥಿಗಳಿಗೆ ಮೀಸಲಿಡಲಾಗುತ್ತಿದೆ. ಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷೆಗೆ ಹೆಚ್ಚುವರಿ ಕೊಠಡಿಗಳನ್ನು ಬಳಕೆ ಮಾಡಲಾಗುತ್ತಿದ್ದು, ಪ್ರತಿ ಕೊಠಡಿಯಲ್ಲಿ ಕೇವಲ 12 ಮಂದಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ.

ಬಹುತೇಕ ಕೇಂದ್ರಗಳಲ್ಲಿ ಎರಡು ಸುತ್ತು ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದೆ. ಕೆಲವು ಕೇಂದ್ರಗಳಲ್ಲಿ ಶಿಕ್ಷಕರು, ಶಾಲಾ ಸಿಬ್ಬಂದಿ ಅಣಕು ಪರೀಕ್ಷೆ ಕಾರ್ಯಾಚರಣೆಯನ್ನೂ ನಡೆಸಿದ್ದಾರೆ.

‘ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಜಿಲ್ಲೆಯಲ್ಲಿ ಒಟ್ಟು 25 ಮಾರ್ಗ ಗುರುತಿಸಿಕೊಳ್ಳಲಾಗಿದೆ. ವಿಚಕ್ಷಣಾ ತಂಡಗಳ ರಚನೆಯಾಗಿದೆ. ಪರೀಕ್ಷಾ ಕಾರ್ಯಕ್ಕಾಗಿ ಸುಮಾರು 1,627 ಸಿಬ್ಬಂದಿ ನಿಯೋಜಿಸಲಾಗಿದ್ದು ಅವರಿಗೆ ಕಾರ್ಯ ಹಂಚಿಕೆ ಮಾಡಲಾಗಿದೆ. ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಗೆ ಸಿಬ್ಬಂದಿ ನಿಯೋಜಿಸುವಂತೆ ಆರೋಗ್ಯ ಇಲಾಖೆಗೆ ಮನವಿ ಮಾಡಿದ್ದೇವೆ’ ಎಂದು ಡಿಡಿಪಿಐ ದಿವಾಕರ ಶೆಟ್ಟಿ ತಿಳಿಸಿದರು.

‘ಈ ಬಾರಿ ಉತ್ತಮ ಫಲಿತಾಂಶ ಸಾಧಿಸಲು ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕವೇ ಗುಣಾತ್ಮಕ ಶಿಕ್ಷಣ ತರಬೇತಿ ನೀಡಲಾಗಿದೆ. ಹೊಸ ಮಾದರಿಯ ಪರೀಕ್ಷೆ ಇದಾಗಿರಲಿದ್ದು ವಿದ್ಯಾರ್ಥಿಗಳಿಗೆ ಪೂರ್ವ ಸಿದ್ಧತೆ ಪರೀಕ್ಷೆ ನಡೆಸಿ ಆತ್ಮವಿಶ್ವಾಸ ಮೂಡಿಸಿದ್ದೇವೆ’ ಎಂದು ಹೇಳಿದರು.

‘ಜೂ.21 ರಿಂದ ಜು.1ರವರೆಗೆ ಸಂಪನ್ಮೂಲ ಶಿಕ್ಷಕರ ಸಹಯೋಗದೊಂದಿಗೆ ಆನ್‌ಲೈನ್ ತರಗತಿ ನಡೆಸಲಾಗಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಕುರಿತು ವಿಶೇಷ ತರಬೇತಿಯನ್ನೂ ನೀಡಲಾಗಿತ್ತು’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT