ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಘಟನಾ ಶಕ್ತಿಯಿಂದ ಅಭಿವೃದ್ಧಿ: ಕೋಟ ಶ್ರೀನಿವಾಸ ಪೂಜಾರಿ

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ
Last Updated 6 ಜುಲೈ 2022, 15:22 IST
ಅಕ್ಷರ ಗಾತ್ರ

ಶಿರಸಿ: ‘ಸಮುದಾಯಗಳು ಸಂಘಟನಾತ್ಮಕವಾಗಿ ಮುನ್ನಡೆದಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಇಲ್ಲಿನ ಸುಪ್ರಿಯಾ ಇಂಟರ್‌ನ್ಯಾಷನಲ್ ಹೋಟೆಲ್‍ನಲ್ಲಿ ಮಂಗಳವಾರ ಆರ್ಯ ಈಡಿಗ, ನಾಮಧಾರಿ, ಬಿಲ್ಲವ ಅಭಿವೃದ್ಧಿ ಸಂಘದ ತಾಲ್ಲೂಕು ಘಟಕದ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

‘ಆರ್ಯ ಈಡಿಗ, ನಾಮಧಾರಿ, ಬಿಲ್ಲವ ಸಮಾಜ ಎದುರಿಸುತ್ತಿರುವ ಸವಾಲುಗಳನ್ನು ಬೃಹ್ಮಶ್ರೀ ನಾರಾಯಣ ಗುರುಗಳ ಪರಿಕಲ್ಪನೆಯೊಂದಿಗೆ ವಿಶ್ಲೇಷಿಸಿ ಸಂಘಟನಾತ್ಮಕವಾಗಿ ಮುಂದುವರೆಯಬೇಕು’ ಎಂದು ಕರೆ ನೀಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ‘ಎಲ್ಲ ಸಮುದಾಯಗಳ ಸಹಕಾರದೊಂದಿಗೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಯೊಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ನಾಮಧಾರಿ ಸಮಾಜದ ಪ್ರಗತಿಪರ ಚಟುಟಿಕೆಗಳಿಗೆ ಸಹಕಾರವಿದೆ’ ಎಂದರು.

ಆರ್ಯ ಈಡಿಗ ನಾಮಧಾರಿ ಬಿಲ್ಲವ ಅಭಿವೃದ್ಧಿ ಸಂಘದ ಅಧ್ಯಕ್ಷ ಭೀಮಣ್ಣ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಸಿ.ಎಫ್.ನಾಯ್ಕ, ಗಣಪತಿ ನಾಯ್ಕ, ಮಾರಿಕಾಂಬಾ ದೇವಸ್ಥಾನದ ಅಧ್ಯಕ್ಷ ಆರ್.ಜಿ. ನಾಯ್ಕ, ಸಾಮಾಜಿಕ ಕಾರ್ಯಕರ್ತ ರವೀಂದ್ರ ನಾಯ್ಕ, ವೆಂಕಟೇಶ ನಾಯ್ಕ, ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ಕುಮಾರ ನಾಯ್ಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT