ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಂದ ವಿಧಾನಸೌಧಕ್ಕೆ ಮುತ್ತಿಗೆ

Last Updated 14 ಜನವರಿ 2019, 11:58 IST
ಅಕ್ಷರ ಗಾತ್ರ

ಕಾರವಾರ: ‘ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆ.13ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ’ ಎಂದು ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜೆ.ಎ.ಲಕ್ಷ್ಮೀನಾರಾಯಣಗೌಡ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ರೈತರ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿಫಲವಾಗಿವೆ. ಇದರಿಂದಾಗಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ’ ಎಂದು ಆರೋಪಿಸಿದರು.

‘ಸುಪ್ರೀಂಕೋರ್ಟ್ ತೀರ್ಪಿನಂತೆ ಮಹದಾಯಿ, ಕಳಸಾ– ಬಂಡೂರಿ ಯೋಜನೆಯನ್ನು ಅನುಷ್ಠಾನಕ್ಕೆ ತರಬೇಕು. ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಬರಗಾಲದಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಸಬ್ಸಿಡಿ ಹಾಗೂ ಬೆಳೆಹಾನಿ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು. ಫಸಲ್ ಭಿಮಾ ಯೋಜನೆಯಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಬೇಕು’ ಎಂದು ಅವರು ಒತ್ತಾಯಿಸಿದರು.

‘ಕರಾವಳಿಯಲ್ಲಿ ಸಿಆರ್‌ಝೆಡ್ ಕಾಯ್ದೆ ರದ್ದು ಮಾಡಬೇಕು. ಮೀನುಗಾರರಿಗೆ ಮೀನುಗಾರಿಕೆಗೆ ಮುಕ್ತ ಅವಕಾಶ ಕಲ್ಪಿಸಿಕೊಡಬೇಕು ಎಂಬ ಬೇಡಿಕೆಯನ್ನೂ ಈ ವೇಳೆ ಮುಂದಿಡಲಿದ್ದೇವೆ’ ಎಂದು ತಿಳಿಸಿದರು.

ಪ್ರತಿಭಟನೆಯ ಎಚ್ಚರಿಕೆ: ‘ಸಿದ್ದಾಪುರ ತಾಲ್ಲೂಕಿನ ರಾಮಚಂದ್ರ ಹೆಗಡೆ ಹಾರ್ಸಿಮನೆ ಅವರಿಗೆ ಬರಬೇಕಾದ ನ್ಯಾಯಯುತ ಸೌಲಭ್ಯಗಳನ್ನು ನೀಡಬೇಕು. ಇಲ್ಲದಿದ್ದಲ್ಲಿ ತೀವ್ರ ಹೋರಾಟ ನಡೆಸಲಾಗುವುದು’ ಎಂದೂ ಎಚ್ಚರಿಸಿದರು.

‘ಸಿದ್ದಾಪುರ ತಾಲ್ಲೂಕಿನ ಹಾರ್ಸಿಕಟ್ಟಾ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘದಲ್ಲಿ 1965ರಿಂದ ಅವರು ಉದ್ಯೋಗಿಯಾಗಿದ್ದರು. ತಪ್ಪು ಲೆಕ್ಕ ಬರೆದಿದ್ದಾರೆ ಎಂದು ಆರೋಪಿಸಿ 1980ರಲ್ಲಿ ಅವರನ್ನು ವಜಾ ಮಾಡಲಾಗಿತ್ತು. ಆದರೆ, ಅವರು ತಪ್ಪು ಮಾಡಿಲ್ಲ ಎನ್ನುವುದು ನ್ಯಾಯಾಲಯದಿಂದ ಸಾಬೀತಾಗಿದೆ’ ಎಂದು ಅವರು ತಿಳಿಸಿದರು.

‘ನ್ಯಾಯಾಲಯದಿಂದ ಆದೇಶ ಬಂದರೂ ಅವರನ್ನು ವಾಪಸ್ ಕೆಲಸಕ್ಕೆ ತೆಗೆದುಕೊಂಡಿಲ್ಲ. ಅವರ ಸೇವಾ ಸೌಲಭ್ಯಗಳನ್ನು ನೀಡಬೇಕು ಎಂದು ಸಹಕಾರ ಸಂಘಗಳ ಇಲಾಖೆ ಸಹಾಯಕ ನಿಬಂಧಕರ ನ್ಯಾಯಾಲಯ 2009ರಲ್ಲಿ ಆದೇಶಿಸಿದೆ. ಆದರೂ ಇದುವರೆಗೆ ಅವರಿಗೆ ಸೌಲಭ್ಯ ನೀಡಿಲ್ಲ. ಈಗ ರೈತ ಸಂಘದವರು ಹೋಗಿ ಚರ್ಚಿಸಿದ ನಂತರ ಮಾತುಕತೆಗೆ ಬರುವುದಾಗಿ ತಿಳಿಸಿದ್ದಾರೆ. ಆದರೆ, ರಾಜಿ ಸಂಧಾನ ಬೇಡ’ ಎಂದು ಅವರುಹೇಳಿದರು.

ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪುಟ್ಟಯ್ಯ ಟಿ., ಜಿಲ್ಲಾ ಘಟಕದ ಅಧ್ಯಕ್ಷ ದಿವಾಕರ ಹೆಗಡೆ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಪಾರ್ವತಿ ರಾಠೋಡ, ಪ್ರಮುಖರಾದ ಸಯ್ಯದ್ ಖತೀಬ್, ಜ್ಯೋತಿ ಕನಕಮ್ಮನವರ್, ಸಂಶದ್ ಬೇಗಂ ಬಳ್ಳಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT