ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಕೂಟರ್, ಟ್ಯಾಂಕರ್ ನಡುವೆ ಅಪಘಾತ: ತಂದೆ, ಮಗಳ ದುರ್ಮರಣ

Last Updated 29 ಸೆಪ್ಟೆಂಬರ್ 2020, 7:46 IST
ಅಕ್ಷರ ಗಾತ್ರ

ಯಲ್ಲಾಪುರ: ತಾಲ್ಲೂಕಿನ ಅರಬೈಲ್‌ ಸಮೀಪದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಮಂಗಳವಾರ ಗ್ಯಾಸ್ ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ತಂದೆ,‌ ಮಗಳು ಮೃತಪಟ್ಟಿದ್ದಾರೆ.

ಯಲ್ಲಾಪುರದ ಅಗ್ನಿಶಾಮಕ ದಳ ಠಾಣೆಯಲ್ಲಿ ಪ್ರಮುಖ ಅಗ್ನಿಶಾಮಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ವಿನೋದ ಕಿಂದಳಕರ್ (56) ಹಾಗೂ ಅವರ ಮಗಳು ಸುನೇಹಾ ಕಿಂದಳಕರ್ (12) ಮೃತರು.

ಅವರು ಯಲ್ಲಾಪುರದಿಂದ ತಮ್ಮ ಸ್ವಂತ ಊರಾದ ಅಂಕೋಲಾ ತಾಲ್ಲೂಕಿನ ಹಾರವಾಡಾಕ್ಕೆ ಹೊರಟಿದ್ದರು ಎನ್ನಲಾಗಿದೆ. ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ. ಯಲ್ಲಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT