ಬುಧವಾರ, ಮಾರ್ಚ್ 29, 2023
32 °C

ಭಟ್ಕಳ ನ್ಯಾಯಾಲಯದಲ್ಲಿ ಅಗ್ನಿ ಅವಘಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭಟ್ಕಳ: ಪಟ್ಟಣದ ರಂಗಿನಕಟ್ಟಯಲ್ಲಿರುವ ಭಟ್ಕಳ ಜೆ.ಎಂ.ಎಫ್.ಸಿ. ನ್ಯಾಯಾಲಯ ಕಟ್ಟಡದಲ್ಲಿ ಶುಕ್ರವಾರ ನಸುಕಿನಲ್ಲಿ ಅಗ್ನಿ ಅವಘಡ ನಡೆದಿದೆ. ನ್ಯಾಯಾಲಯದ ಮುಂದಿನ ಭಾಗ ಸಂಪೂರ್ಣ ಸುಟ್ಟಿದೆ.

ಮೇಲ್ನೋಟಕ್ಕೆ, ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಳಿಗ್ಗೆ 4.15ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಾಗ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದರು. ಹರಸಾಹಸ ಪಟ್ಟರೂ ಬೆಂಕಿಯ ಕೆನ್ನಾಲಿಗೆ ಮುಂಬದಿ ಕಟ್ಟಡವನ್ನು ಸಂಪೂರ್ಣ ಆವರಿಸಿತು.

ನ್ಯಾಯಾಲಯದಲ್ಲಿದ್ದ ಸಾವಿರಾರು ಕೇಸುಗಳ ಕಡತಗಳು ಅವಘಡದಲ್ಲಿ ಸುಟ್ಟುಹೋಗಿರುವ ಆತಂಕ ವ್ಯಕ್ತವಾಗಿತ್ತು. ಅದೃಷ್ಟವಶಾತ್ ಅವುಗಳಿಗೆ ಏನೂ ಆಗಿಲ್ಲ. ಅಗ್ನಿ ಶಾಮಕದಳದ ಸಿಬ್ಬಂದಿ ಕಡತಗಳನ್ನು ರಕ್ಷಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು