ಸೋಮವಾರ, ಜೂನ್ 21, 2021
23 °C

ಕಾರವಾರ: ಜಿ.ಪಂ ಅಭಿಲೇಖಾಲಯ ಕಟ್ಟಡದಲ್ಲಿ ಬೆಂಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ನಗರದ ಜಿಲ್ಲಾ ಪಂಚಾಯಿತಿ ಮಹಾಅಭಿಲೇಖಾಲಯ ಕಟ್ಟಡದ ನೆಲ ಅಂತಸ್ತಿನಲ್ಲಿ ಶನಿವಾರ ಬೆಳಿಗ್ಗೆ ಅಗ್ನಿ ಅವಘಡ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಒಂದಷ್ಟು ಪೀಠೋಪಕರಣಗಳು, ಟಿ.ವಿ ಹಾನಿಗೀಡಾಗಿವೆ.

ವಿದ್ಯುತ್ ಶಾರ್ಟ್ ಸರ್ಕೀಟ್ ಆಗಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಪ್ರಿಯಾಂಗಾ, 'ಆರಂಭದಲ್ಲಿ 'ಕೆ-ಸ್ವಾನ್' ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಮರದ ಪೀಠೋಪಕರಣಗಳು ಸುಟ್ಟು ಹೋಗಿವೆ. ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ಹರಡುವುದನ್ನು ನಿಯಂತ್ರಿಸಿದ್ದಾರೆ. ಕಟ್ಟಡದ ಒಳಗೆ ಹೋಗಿ ನಾನು ಪರಿಶೀಲಿಸಿದ್ದೇನೆ. ದಾಖಲೆಗಳು ಮತ್ತು ಕಂಪ್ಯೂಟರ್ ಮೂರನೇ ಮಹಡಿಯಲ್ಲಿದ್ದು, ಅವುಗಳಿಗೆ ಹಾನಿಯಾಗಿಲ್ಲ. ಅವಘಡದ ಬಗ್ಗೆ ತನಿಖೆ ನಡೆಸಲಾಗುತ್ತಿದೆ' ಎಂದು ತಿಳಿಸಿದರು.

ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರೂ ಭೇಟಿ ನೀಡಿ, ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಪರಿಶೀಲಿಸಿದರು. ಮರದ ಮತ್ತು ಪ್ಲೈವುಡ್ ಪೀಠೋಪಕರಣಗಳು ಇದ್ದ  ಕಾರಣ ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು