ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈನ್ ಶಾಪ್‌ಗೆ ಬೆಂಕಿ: ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ಭಸ್ಮ

Last Updated 12 ಡಿಸೆಂಬರ್ 2021, 8:05 IST
ಅಕ್ಷರ ಗಾತ್ರ

ಗೋಕರ್ಣ: ಇಲ್ಲಿನ ಬಸ್ ನಿಲ್ದಾಣದ ಹಿಂಬದಿಯಲ್ಲಿರುವ ವನಶ್ರೀ ವೈನ್ ಶಾಪ್‌ಗೆ ಶನಿವಾರ ಮಧ್ಯರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ಹಾಗೂ ವೈನ್ ಭಸ್ಮವಾಗಿದೆ.

ಬೆಂಕಿ ಬೀಳಲು ನಿಖರವಾದ ಕಾರಣ ತಿಳಿದುಬಂದಿಲ್ಲ. ಶನಿವಾರ ಬೆಳಿಗ್ಗೆ ಸುಮಾರು ₹ 20 ಲಕ್ಷಕ್ಕೂ ಹೆಚ್ಚು ಮೊತ್ತದ ಮದ್ಯ ಸರಬರಾಜು ಆಗಿತ್ತು. ಕೆಲವು ದಿನಗಳ ಹಿಂದೆ ಪೂರೈಕೆಯಾಗಿದ್ದ ಮದ್ಯವೂ ಸ್ವಲ್ಪ ದಾಸ್ತಾನು ಇತ್ತು ಎನ್ನಲಾಗಿದೆ. ಒಟ್ಟು ₹ 25 ಲಕ್ಷಕ್ಕೂ ಹೆಚ್ಚು ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಬಸ್ ನಿಲ್ದಾಣದಲ್ಲಿದ್ದ ಪ್ರವಾಸಿಗರು ಬೆಂಕಿ ಉರಿಯುತ್ತಿರುವುದನ್ನು ನೋಡಿ ಪೊಲೀಸರಿಗೆ ತಿಳಿಸಿದ್ದಾರೆ. ಕುಮಟಾದಿಂದ ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸಿದರು.

ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡ ಅಗ್ನಿಶಾಮಕ ದಳದ ಸಿಬ್ಬಂದಿ
ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡ ಅಗ್ನಿಶಾಮಕ ದಳದ ಸಿಬ್ಬಂದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT