ಸೋಮವಾರ, ಏಪ್ರಿಲ್ 12, 2021
29 °C

ಹೈದರ್ ಘಾಟ್‌ನಲ್ಲಿ ಹುಲ್ಲಿಗೆ ಬೆಂಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ತಾಲ್ಲೂಕಿನ ಶಿರವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೈದರ್ ಘಾಟ್‌ ಅರಣ್ಯ ಪ್ರದೇಶದಲ್ಲಿ ಹುಲ್ಲಿಗೆ ಕಿಡಿಗೇಡಿಗಳು ಗುರುವಾರ ಬೆಂಕಿ ಹಚ್ಚಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿಯನ್ನು ನಂದಿಸಿ ಹೆಚ್ಚಿನ ಅಪಾಯ ತಪ್ಪಿಸಿದರು.

ಒಣ ಹುಲ್ಲಿಗೆ ತಗುಲಿದ ಬೆಂಕಿಯು, ಗಾಳಿಯಿಂದಾಗಿ ತರಗೆಲೆಗಳಿಗೆ ಹರಡಿತ್ತು. ಬಳಿಕ ಅರಣ್ಯ ಪ್ರದೇಶವನ್ನು ವ್ಯಾಪಿಸಿತ್ತು. ಈ ಭಾಗದಲ್ಲಿ ಅತ್ಯಮೂಲ್ಯ ಸಸ್ಯ ಸಂಪತ್ತು ಹಾಗೂ ವನ್ಯಜೀವಿಗಳಿವೆ. ಬೆಂಕಿಯ ಪ್ರಮಾಣ ಮತ್ತಷ್ಟು ಹೆಚ್ಚುತ್ತಿದ್ದರೆ ಅವುಗಳಿಗೆ ಅಪಾಯವಾಗುವ ಸಾಧ್ಯತೆಯಿತ್ತು. ತಕ್ಷಣ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಸಂಜೀವ ಅಸ್ನೋಟಿಕರ ಹಾಗೂ ಶಶಿಕಾಂತ ಬೆಂಕಿಯನ್ನು ಆರಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು