ಶನಿವಾರ, ಜೂಲೈ 4, 2020
24 °C

ಜೂನ್ 14ರವರೆಗೆ ಮೀನುಗಾರಿಕೆಗೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಈ ಬಾರಿ ಮುಂಗಾರು ಅವಧಿಯಲ್ಲಿ ಆಳ ಸಮುದ್ರ ಯಾಂತ್ರೀಕೃತ ಮೀನುಗಾರಿಕೆ ನಿಷೇಧವನ್ನು ಜೂನ್ 14ರವರೆಗೆ ಮುಂದೂಡಿರುವುದಾಗಿ ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ. ಪರಿಷ್ಕೃತ ಆದೇಶದ ಪ್ರಕಾರ ಜುಲೈ 31ರವರೆಗೆ ಒಟ್ಟು 47 ದಿವಸ ಮೀನುಗಾರಿಕೆ ನಿಷೇಧವಿರುತ್ತದೆ.

ಲಾಕ್‌ಡೌನ್ ಅವಧಿಯಲ್ಲಿ ಮಾರ್ಚ್ 24ರಿಂದ ಏ.10ವರೆಗೆ (17 ದಿನ) ಮೀನುಗಾರಿಕೆಗೆ ಅವಕಾಶ ಇರಲಿಲ್ಲ. ಆದ್ದರಿಂದ ಮತ್ಸ್ಯೋದ್ಯಮಕ್ಕೆ ನಷ್ಟವಾಗಿದ್ದು, ಮೀನುಗಾರಿಕೆ ಮುಂದುವರಿಸಲು ಅನುಮತಿ ನೀಡುವಂತೆ ಮೀನುಗಾರ ಸಂಘಟನೆಗಳು ಮನವಿ ಸಲ್ಲಿಸಿದ್ದವು. ಈ ಸಂಬಂಧ ತಜ್ಞರ ಸಮಿತಿ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಅಭಿಪ್ರಾಯ ಪಡೆದು ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯವು ಈ ಅವಕಾಶ ನೀಡಿದೆ.

ಪ್ರತಿ ವರ್ಷದಂತೆ ಈ ವರ್ಷವೂ ಜೂನ್ 1ರಿಂದ ಜುಲೈ 31ರವರೆಗೆ, ಒಟ್ಟು 61 ದಿನ ದೇಶದಾದ್ಯಂತ ಮೀನುಗಾರಿಕೆಯನ್ನು ನಿಷೇಧಿಸಿ ಮಾರ್ಚ್ 20ರಂದು ಆದೇಶಿಸಲಾಗಿತ್ತು. ಈ ಅವಧಿಯಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ನಡೆಸಬಹುದು ಎಂದು ಆದೇಶದಲ್ಲಿ ತಿಳಿಸಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು