ಭಾನುವಾರ, ನವೆಂಬರ್ 17, 2019
21 °C

ಶಿರಸಿ: ಕಿಬ್ಬಳ್ಳಿ ಕಾಲುಸಂಕ ಉದ್ಘಾಟನೆ

Published:
Updated:
Prajavani

ಶಿರಸಿ: ಶಾಸಕರ ಪ್ರದೇಶಾಭಿವೃದ್ಧಿ ನಿಧಿಯ ₹ 3 ಲಕ್ಷ ಅನುದಾನದಲ್ಲಿ ನಿರ್ಮಿಸಿರುವ ತಾಲ್ಲೂಕಿನ ನೆಗ್ಗು ಗ್ರಾಮ ಪಂಚಾಯ್ತಿ ವ್ಯಾಪ‍್ತಿಯ ಕಿಬ್ಬಳ್ಳಿಯ ಕಾಲುಸಂಕವನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೋಮವಾರ ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಅವರು ತಾಲ್ಲೂಕು ಮಟ್ಟದ 16ನೇ ಸುತ್ತಿನ ಕಾಲುಬಾಯಿ ಬೇನೆ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗ್ರಾಮೀಣ ರಸ್ತೆಗಳಿಗೆ ಹೆಚ್ಚಿನ ಅನುದಾನ ಸಿಗಬೇಕು. ಇ–ಸ್ವತ್ತು ಸಮಸ್ಯೆ ಕೂಡ ನಿವಾರಣೆಯಾಗಬೇಕು. ಈ ಕುರಿತು ಸರ್ಕಾರ ಮಟ್ಟದಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.

ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ. ಸುಬ್ರಾಯ ಭಟ್ಟ ಅವರು ಜಾನುವಾರುಗಳಿಗೆ ಬರುವ ಕಾಲುಬಾಯಿ ಬೇನೆ ರೋಗದ ಲಕ್ಷಣ, ಲಸಿಕೆ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸರಸ್ವತಿ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯ್ತಿ ಸದಸ್ಯೆ ಪ್ರಭಾವತಿ ಗೌಡ, ತಾಲ್ಲೂಕು ಪಂಚಾಯ್ತಿ ಸದಸ್ಯೆ ಮಹಾಲಕ್ಷ್ಮಿ ಗೌಡ, ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸಂತೋಷ ನಾಯ್ಕ, ಹಾರೂಗಾರ ಗ್ರೂಪ್ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಗುರುಪಾದ ಹೆಗಡೆ, ಎಂಜಿನಿಯರ್ ರಾಮಚಂದ್ರ ಗಾಂವಕರ ಇದ್ದರು. ಪಿಡಿಒ ಮಮತಾ ಗುಡ್ಡದಮನೆ ಸ್ವಾಗತಿಸಿದರು. 

ಪ್ರತಿಕ್ರಿಯಿಸಿ (+)