ಹೊನ್ನಾವರ (ಉತ್ತರ ಕನ್ನಡ): ಕುಮಟಾ– ಹೊನ್ನಾವರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಾ.ಎಂ.ಪಿ.ಕರ್ಕಿ (86) ಅವರು ಪಟ್ಟಣದ ಸೇಂಟ್ ಇಗ್ನೇಶಿಯಸ್ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು.

ಅವರಿಗೆ ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ.

ಅವರು 1983 ಹಾಗೂ 1994ರಲ್ಲಿ ಎರಡು ಸಲ ಶಾಸಕರಾಗಿದ್ದರು. ಒಂದು ಬಾರಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಬಿ.ಜೆ.ಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ, ಹೊನ್ನಾವರದ ಎಜುಕೇಷನ್ ಸೊಸೈಟಿ ಅಧ್ಯಕ್ಷ ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಉತ್ತರ ಕನ್ನಡದಲ್ಲಿ ಬಿ.ಜೆ.ಪಿ ಸಂಘಟನೆಗೆ ಅವರು ಅಪಾರ ಶ್ರಮಿಸಿದ್ದರು.

ಅಂತ್ಯಕ್ರಿಯೆಯು ಮಂಗಳವಾರ ನಡೆಯಲಿದೆ ಎಂದು ಅವರ ಆಪ್ತರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.