ಮಾಜಿ ಸಚಿವ ಪಿ.ಎಸ್.ಜೈವಂತ ನಿಧನ

ಶಿರಸಿ: ಮಾಜಿ ಸಚಿವ ಪ್ರೇಮಾನಂದ ಎಸ್.ಜೈವಂತ (77) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು. ಅವರು ಕೆಲ ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರರು, ಒಬ್ಬ ಪುತ್ರಿ ಇದ್ದಾರೆ.
1998ರಲ್ಲಿ ಜೆ.ಎಚ್.ಪಟೇಲ್ ಸರ್ಕಾರದಲ್ಲಿ ಅಬಕಾರಿ ಸಚಿವರಾಗಿದ್ದರು. ಜನತಾ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಅವತು1994ರಲ್ಲಿ ಮೊದಲ ಬಾರಿಗೆ ಶಿರಸಿ ಕ್ಷೇತ್ರದಿಂದ ಶಾಸಕರಾಗಿದ್ದರು. 1999ರಲ್ಲಿ ಪಕ್ಷೇತರರಾಗಿ, 2004ರಲ್ಲಿ ಕಾಂಗ್ರೆಸ್ ನಿಂದ ಹಾಗೂ 2008ರಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ ಸೋತಿದ್ದರು. ಇತ್ತೀಚಿನ ವರ್ಷಗಳಲ್ಲಿ ರಾಜಕೀಯದಿಂದ ದೂರ ಉಳಿದಿದ್ದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.