ಮಂಗಳವಾರ, ಆಗಸ್ಟ್ 3, 2021
28 °C
ಚಾಲನೆ ನೀಡಿದ ಸಚಿವ ಶಿವರಾಮ ಹೆಬ್ಬಾರ್

ವಾದಿರಾಜ ಮಠಕ್ಕೆ ಗೊಬ್ಬರ ಗ್ಯಾಸ್ ಘಟಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ಸಾರ್ವಜನಿಕ ಸಹಭಾಗಿತ್ವದಲ್ಲಿ (ಪಿಪಿಪಿ) ಅನುಷ್ಠಾನಗೊಳ್ಳುತ್ತಿರುವ ಕೇಂದ್ರ ಸರ್ಕಾರದ ಗೋಬರ್‌ಧನ್ ಯೋಜನೆಯಡಿ ಗೊಬ್ಬರ ಗ್ಯಾಸ್ ಘಟಕ ನಿರ್ಮಾಣಕ್ಕೆ ತಾಲ್ಲೂಕಿನ ವಾದಿರಾಜ ಮಠದಲ್ಲಿ ಬುಧವಾರ ಚಾಲನೆ ನೀಡಲಾಯಿತು.

ಜಿಲ್ಲಾ ಪಂಚಾಯ್ತಿ ರೂಪಿಸಿರುವ ಈ ಯೋಜನೆಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಜಂಟಿಯಾಗಿ ಚಾಲನೆ ನೀಡಿದರು.

‘ಜಾನುವಾರು ಸೆಗಣಿ, ಹಸಿ ಕಸ ಹೆಚ್ಚು ಉತ್ಪತ್ತಿಯಾಗುವ ಗೋಶಾಲೆ, ಮಠ, ಅನ್ನಛತ್ರ ಇಂತಹ ಸ್ಥಳಗಳಿಗೆ ಆದ್ಯತೆ, ‍ಪಬ್ಲಿಕ್ ಪ್ರೈವೇಟ್ ಪಾರ್ಟನರ್‌ಷಿಪ್‌ನಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತದೆ. ಅಲ್ಲಿ ಲಭ್ಯವಾಗುವ ತ್ಯಾಜ್ಯ ಆಧರಿಸಿ, ಗೋಬರ್ ಗ್ಯಾಸ್ ಘಟಕ ನಿರ್ಮಾಣವಾಗಲಿದೆ. ಶೇ 50ರಷ್ಟು ವೆಚ್ಚವನ್ನು ಸರ್ಕಾರ ಭರಿಸುತ್ತದೆ’ ಎಂದು ಹೆಬ್ಬಾರ್ ತಿಳಿಸಿದರು.

ಎಲ್‌ಪಿ ಗ್ಯಾಸ್ ಮೇಲಿನ ಒತ್ತಡ ಕಡಿಮೆ ಮಾಡಿ ಪುನರುತ್ಪತ್ತಿಯಾಗುವ ಸಾಂಪ್ರದಾಯಿಕ ಗೊಬ್ಬರ ಗ್ಯಾಸ್ ಬಳಕೆ ಹೆಚ್ಚಬೇಕು. ಹೆಚ್ಚು ಜನ ಸೇರುವ ಪ್ರದೇಶಗಳಲ್ಲಿ ಅಡುಗೆಗೆ ಈ ಅನಿಲ ಬಳಕೆಯಾದರೆ, ಎಲ್‌ಪಿಜಿ ಉಳಿತಾಯವಾಗುತ್ತದೆ ಎಂದರು.

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಸದಸ್ಯರಾದ ರವಿ ಹಳದೋಟ, ನರಸಿಂಹ ಹೆಗಡೆ, ಜಿಲ್ಲಾ ಪಂಚಾಯ್ತಿ ಸದಸ್ಯ ಜಿ.ಎನ್.ಹೆಗಡೆ, ಸೋಂದಾ ಗ್ರಾಮ ಪಂಚಾಯ್ತಿ ಅಧ್ಯಕ್ಷ ಮಂಜುನಾಥ ಭಂಡಾರಿ, ಮಠದ ಪ್ರಮುಖ ಮಾಣಿಕ್ಯ ಉಪಾಧ್ಯ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.