ಗುರುವಾರ , ಅಕ್ಟೋಬರ್ 29, 2020
19 °C

ಕಾರು– ಲಾರಿ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲ್ಲಾಪುರ: ತಾಲ್ಲೂಕಿನ ಕಿರವತ್ತಿ ಬಳಿ ಗುರುವಾರ ಸಂಜೆ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತವಾಗಿದೆ. ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹೊಸಳ್ಳಿ – ಗಾಂವಠಾಣಾಕ್ಕೆ ಹೋಗುವ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಈ ಅಪಘಾತ ನಡೆದಿದೆ. ಅಂಕೋಲಾ ಕಡೆಗೆ ತೆರಳುತ್ತಿದ್ದ ದೆಹಲಿ‌ ನೋಂದಣಿ ಸಂಖ್ಯೆ ಹೊಂದಿದ್ದ ಕಾರು ಹಾಗೂ ಹುಬ್ಬಳ್ಳಿಯತ್ತ ಸಾಗುತ್ತಿದ್ದ ಮಹಾರಾಷ್ಟ್ರ ನೋಂದಣಿಯ ಲಾರಿ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತವಾಗಿದೆ.

ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಮೃತಪಟ್ಟವರು. ಕಾರು ಪುಷ್ಪಾ ನಾಯರ್ ಎಂಬುವವರ ಹೆಸರಿನಲ್ಲಿ ನೋಂದಣಿಯಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭಿಸಿದೆ. ಹೀಗಾಗಿ ಕಾರು ಕೇರಳಕ್ಕೆ ತೆರಳುತ್ತಿತ್ತು ಎಂದು ಶಂಕಿಸಲಾಗಿದೆ.
ಪೋಲಿಸರು ಸ್ಥಳಕ್ಕೆ ತೆರಳಿದ್ದು, ತನಿಖೆ ಕೈಗೊಂಡಿದ್ದಾರೆ.

ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಕ್ಕೆ ಯಲ್ಲಾಪುರದಿಂದ ತೆರಳುತ್ತಿದ್ದ ಕ್ರೇನ್‌ ಕೂಡ ಅಪಘಾತಕ್ಕೀಡಾಗಿದೆ. ಮಾವಳ್ಳಿ ಕ್ರಾಸ್ ಬಳಿ ಬೀಡಾಡಿ ದನಗಳು ಅಡ್ಡ ಬಂದು ಕ್ರೇನ್ ಪಲ್ಟಿಯಾಗಿದೆ. ಅದರ ಚಾಲಕನ ಕೈಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು