ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿ ಮೆಚ್ಚಿ ಕಾಂಗ್ರೆಸ್‌ಗೆ ಸೇರ್ಪಡೆ: ಟಿ.ರಘುಮೂರ್ತಿ

Last Updated 12 ಫೆಬ್ರುವರಿ 2018, 10:12 IST
ಅಕ್ಷರ ಗಾತ್ರ

ಚಳ್ಳಕೆರೆ: ತಾಲ್ಲೂಕಿನಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ವಿವಿಧ ಪಕ್ಷಗಳ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದು, ಪಕ್ಷ ದಿನದಿಂದ ದಿನಕ್ಕೆ ಬಲಿಷ್ಠವಾಗುತ್ತಿದೆ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ನಗರದ ಶಾಸಕರ ಭವನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಪದಾಧಿಕಾರಿಗಳ ಆಯ್ಕೆ ಮತ್ತು ವಿವಿಧ ಪಕ್ಷಗಳ ಮುಖಂಡರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಚಳ್ಳಕೆರೆ ವಿಧಾನಸಭೆ ಕ್ಷೇತ್ರ ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಮುಖ್ಯವಾಗಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸ್ಥಾಪನೆಯಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ನೂರು ಹಾಸಿಗೆಯ ಮಕ್ಕಳ ಮತ್ತು ಮಹಿಳಾ ಆಸ್ಪತ್ರೆ ಸ್ಥಾಪಿಸಲಾಗಿದೆ. ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಗಳಲ್ಲಿಯೇ ಪ್ರಥಮ ತುರ್ತು ನಿಗಾ ಘಟಕವನ್ನು ಚಳ್ಳಕೆರೆಯಲ್ಲಿ ಆರಂಭಿಸಲಾಗಿದೆ.ರಾಜ್ಯದಲ್ಲಿಯೇ ಅತಿಹೆಚ್ಚು ಅನುದಾನ ಪಡೆದಿರುವ ಹೆಗ್ಗಳಿಗೆ ಚಳ್ಳಕೆರೆ ವಿಧಾನಸಭೆ ಕ್ಷೇತ್ರದ್ದಾಗಿದೆ. ಇದಕ್ಕೆ ತಾಲ್ಲೂಕಿನಾದ್ಯಂತ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದ್ದು, ಪ್ರತಿ ಗ್ರಾಮಗಳ ಮುಖಂಡರು ಕಾಂಗ್ರೆಸ್ ಪರವಾಗಿದ್ದಾರೆ ಎಂದು ಹೇಳಿದರು.

ನಗರದ ಮೈರಾಡ ಕಾಲೊನಿಯ ವಿವಿಧ ಪಕ್ಷಗಳ ಮುಖಂಡರು ಪಕ್ಷಕ್ಕೆ ಸೇರ್ಪಡೆಯಾದರು. ಕಾಂಗ್ರೆಸ್ ಸಾಮಾಜಿಕ ಜಾಲತಾಣ ಅಧ್ಯಕ್ಷ ಎಸ್.ಪುರುಷೋತ್ತಮ ನಾಯಕ, ಮುಬಾರಕ್ ಮಾತನಾಡಿದರು.

ಎಪಿಎಂಸಿ ಅಧ್ಯಕ್ಷ ರೆಡ್ಡಿಹಳ್ಳಿ ಶಿವಣ್ಣ, ನಗರಸಭೆ ಸದಸ್ಯೆ ಲಕ್ಷ್ಮೀದೇವಿ, ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಡಿ.ಟಿ.ಭೂತಲಿಂಗಪ್ಪ, ಚಿತ್ರದುರ್ಗ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಭಾಗ್ಯಲಕ್ಷ್ಮಿ, ಕಾಂಗ್ರೆಸ್ ಎಸ್‌ಸಿ ಘಟಕ ಜಿಲ್ಲಾ ಅಧ್ಯಕ್ಷ ಕರಿಕೆರೆ ರಾಜಣ್ಣ, ಮೈರಾಡ ಕಾಲೊನಿಯ ಎಸ್.ಮಧು, ಎಂ.ಬಸವರಾಜ, ಸರ್ಕಾರಿ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಭಾಗ್ಯಮ್ಮ, ಪಿ.ತಿಪ್ಪೇಸ್ವಾಮಿ, ಮುಖಂಡರಾದ ಎಚ್.ಎಸ್.ಸೈಯದ್ ಆರ್.ಪ್ರಸನ್ನ ಕುಮಾರ್, ಎಸ್.ವೆಂಕಟೇಶ್, ವಿ.ಸುರೇಶ್ ಕುಮಾರ್, ರಾಮಾಂಜಿನಿ, ವೀರೇಶ್, ಮಹಮ್ಮದ್ ಸೈಫುಲ್ಲಾ, ಬಶೀರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT