ಶನಿವಾರ, ಅಕ್ಟೋಬರ್ 1, 2022
20 °C

ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಲ್ಟಿ: ವಾಹನ ಸಂಚಾರಕ್ಕೆ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಹೊನ್ನಾವರ ಪಟ್ಟಣದ ಗೇರುಸೊಪ್ಪ ವೃತ್ತದ ಬಳಿ ಬುಧವಾರ, ಅಡುಗೆ ಅನಿಲ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿದೆ . ಮುನ್ನೆಚ್ಚರಿಕೆ ಕ್ರಮವಾಗಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಮಂಗಳೂರಿನಿಂದ ಹುಬ್ಬಳ್ಳಿಯತ್ತ ಸಾಗುತ್ತಿದ್ದ ಟ್ಯಾಂಕರ್, ಪಟ್ಟಣದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಯಿತು. ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಕಾರಣ, ವಾಹನಗಳ ಸಂಚಾರದಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. ಭಾರಿ ವಾಹನಗಳ ಸಂಚಾರವನ್ನು ಸ್ಥಗಿತ ಮಾಡಲಾಗಿದ್ದು, ಲಘು ವಾಹನಗಳನ್ನು ಪಟ್ಟಣದ ಒಳಭಾಗದಿಂದ ಸಂಚರಿಸಲು ಅನುವು ಮಾಡಲಾಗಿದೆ.

ಅಗ್ನಿ ಶಾಮಕದಳ ಮತ್ತು ಪೊಲೀಸ್ ಸಿಬ್ಬಂದಿ ಟ್ಯಾಂಕರ್ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು