ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿ ಕೆಲಸದಿಂದ ವಿಶ್ವಾಸ ಗಳಿಕೆ: ಕಾಗೇರಿ

Last Updated 31 ಜನವರಿ 2022, 15:01 IST
ಅಕ್ಷರ ಗಾತ್ರ

ಶಿರಸಿ: ನಗರಸಭೆಯ ವಿಶೇಷ ಅನುದಾನದಡಿ ಕೈಗೊಳ್ಳಲಿರುವ ₹1.20 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಸೋಮವಾರ ಚಾಲನೆ ನೀಡಲಾಯಿತು.

ಇಲ್ಲಿನ ಗಾಂಧಿ ನಗರ, ಬಸವೇಶ್ವರ ನಗರ, ವಿವೇಕಾನಂದ ನಗರ ಮತ್ತು ಸಿ.ಪಿ.ಬಝಾರದಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡಿದ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ‘ಹೆಚ್ಚುತ್ತಿರುವ ನಗರದ ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿಯ ವೇಗವನ್ನೂ ಹೆಚ್ಚಿಸಲಾಗುತ್ತಿದೆ’ ಎಂದರು.

‘ಬಿಸಲಕೊಪ್ಪದಿಂದ ತಡಸ ಕ್ರಾಸ್ ವರೆಗೆ ರಾಜ್ಯ ಹೆದ್ದಾರಿ ಇದೆ. ಅದನ್ನು ಕೆ–ಶಿಪ್ ಅನುದಾನ ಬಳಸಿಕೊಂಡು ದುರಸ್ಥಿಪಡಿಸಲು ಲೋಕೋಪಯೋಗಿ ಇಲಾಖೆ ಸಚಿವರಿಗೆ ಸೂಚಿಸಲಾಗಿದೆ’ ಎಂದರು.

‘ಸರ್ಕಾರಿ ನೌಕರರಿಗೆ ವೇತನ, ಆಡಳಿತಾತ್ಮಕ ವೆಚ್ಚಗಳು, ಕೊವಿಡ್ ಸಮಸ್ಯೆ ಅಭಿವೃದ್ಧಿಗೆ ಬಳಸಬೇಕಿದ್ದ ಹಣದ ಕೊರತೆ ಉಂಟಾಗುವಂತೆ ಮಾಡಿದೆ. ಇದರ ನಡುವೆಯೂ ಅಭಿವೃದ್ಧಿ ಕೆಲಸಗಳು ನಿಲ್ಲದಂತೆ ನೋಡಿಕೊಳ್ಳಲಾಗುತ್ತಿದೆ. ಅಭಿವೃದ್ಧಿ ಕೆಲಸದ ಮೂಲಕವೇ ಜನರ ವಿಶ್ವಾಸ ಗಳಿಸುವುದು ನನ್ನ ಆದ್ಯತೆ’ ಎಂದರು.

ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಮಾತನಾಡಿ, ‘ನಗರದಲ್ಲಿ ಅಭಿವೃದ್ಧಿ ಯೋಜನೆಗೆ ಕಳೆದ ಒಂದು ವರ್ಷದಲ್ಲಿ ನೂರು ಕೋಟಿಗೂ ಹೆಚ್ಚು ಅನುದಾನ ಬಿಡುಗಡೆಯಾಗಿದೆ’ ಎಂದರು.

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ನಂದನ ಸಾಗರ, ನಗರಸಭೆ ಉಪಾಧ್ಯಕ್ಷೆ ವೀಣಾ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ಆನಂದ ಸಾಲೇರ, ಸದಸ್ಯರಾದ ಶ್ರೀಕಾಂತ ಬಳ್ಳಾರಿ, ರಾಘವೇಂದ್ರ ಶೆಟ್ಟಿ, ಪೌರಾಯುಕ್ತ ಕೇಶವ ಚೌಗುಲೆ, ಎಇಇ ಉಮೇಶ ನಾಯ್ಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT