ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕ ಅದಾಲತ್ ಜಾಗೃತಿ ಮೂಡಿಸಿ: ಸಿವಿಲ್ ನ್ಯಾಯಾಧೀಶ ಡಿ.ಕಮಲಾಕ್ಷ

Last Updated 15 ಸೆಪ್ಟೆಂಬರ್ 2021, 15:46 IST
ಅಕ್ಷರ ಗಾತ್ರ

ಶಿರಸಿ: ಲೋಕ ಅದಾಲತ್‍ನಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದ್ದು, ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಿ ಎಂದು ಹಿರಿಯಸಿವಿಲ್ ನ್ಯಾಯಾಧೀಶ ಡಿ.ಕಮಲಾಕ್ಷ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸೆ.30ರಂದು ನಡೆಯುವ ಮೆಗಾ ಲೋಕ ಅದಾಲತ್ ಅಂಗವಾಗಿ ಇಲ್ಲಿನ ವಕೀಲರ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಪೂರ್ವಭಾವಿ ಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು.

‘ಹೆಚ್ಚು ಪ್ರಕರಣಗಳು ನ್ಯಾಯಾಲಯಕ್ಕೆ ವಿಚಾರಣೆಗೆ ಬರುತ್ತಿದ್ದು ಒತ್ತಡವೂ ಹೆಚ್ಚುತ್ತಿದೆ. ಜನರು ಅಲೆದಾಡುವ ಸ್ಥಿತಿ ಅಧಿಕವಾಗುತ್ತಿದೆ. ಇವೆಲ್ಲದಕ್ಕೂ ಲೋಕ ಅದಾಲತ್ ಸರಳ ಪರಿಹಾರ ಒದಗಿಸಬಲ್ಲದು’ ಎಂದರು.

1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ರಾಜು ಶೇಡಬಾಳಕರ್, ‘ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಲೋಕ ಅದಾಲತ್ ವೇದಿಕೆಯಾಗುತ್ತದೆ ಎಂಬುದನ್ನು ಗ್ರಾಮೀಣ ಭಾಗದ ಜನರಿಗೆ ತಿಳಿಸುವ ಕೆಲಸವಾಗಲಿ’ ಎಂದರು.

‘ಲೋಕ ಅದಾಲತ್‍ನಲ್ಲಿ ರಾಜಿಯಾದ ಪ್ರಕರಣಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ. ರಾಜಿ ಸಂಧಾನ ಮಾಡಿಕೊಂಡರೆ ಸಮಯ, ಖರ್ಚು ಉಳಿತಾಯವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.

ಸಭೆಯಲ್ಲಿ ಪಿಡಿಒಗಳು, ನಗರಸಭೆ ಹಾಗೂ ತಾಲ್ಲೂಕು ಪಂಚಾಯ್ತಿ ಸಿಬ್ಬಂದಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT