ಉಕ ಜಿಲ್ಲೆಗೆ ಹೆಚ್ಚಿನ ಪರಿಹಾರ ನೀಡಲು ಸಿಎಂಗೆ ಆಗ್ರಹ: ಸಚಿವ ಹೆಬ್ಬಾರ

ಶಿರಸಿ: ಕಳೆದ ಮೂರು ನಾಲ್ಕು ದಿನಗಳ ಕಾಲ ಸುರಿದ ಮಳೆಗೆ ಜಿಲ್ಲೆಯಲ್ಲಿ ₹350 ರಿಂದ 400 ಕೋಟಿ ಹಾನಿ ಸಂಭವಿಸಿರುವ ಅಂದಾಜಿದೆ ಸೋಮವಾರ ಜಿಲ್ಲೆಗೆ ಸಿ.ಎಂ. ಭೇಟಿ ನೀಡಿದ ವೇಳೆ ಹೆಚ್ಚಿನ ಪರಿಹಾರಕ್ಕೆ ಒತ್ತಾಯಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು.
ತಾಲ್ಲೂಕಿನ ಗುಡ್ನಾಪುರ ಕೆರೆ, ವರದಾ ನದಿಗೆ ಭಾನುವಾರ ಬಾಗಿನ ಅರ್ಪಿಸಿದ ಬಳಿಕ ಮಾಧ್ಯಮದವರ ಜತೆ ಅವರು ಮಾತನಾಡಿದರು.
'ಪಿಡಬ್ಲ್ಯೂಡಿ ಮುಖ್ಯ ಎಂಜಿನಿಯರ್, ರಾಷ್ಟ್ರೀಯ ಹೆದ್ದಾರಿ ಕಾರ್ಯದರ್ಶಿ ಸೇರಿದಂತೆ ಹಲವು ಅಧಿಕಾರಿಗಳು ಯಲ್ಲಾಪುರಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಜಿಲ್ಲಾಮಟ್ಟದ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಾಗಿದ್ದು ಹಾನಿ ಅಂದಾಜು ಮಾಹಿತಿ ಪಡೆಯಲಾಗಿದೆ. ನಿಖರ ವರದಿಗೆ ಹತ್ತು ದಿನವಾದರೂ ಬೇಕು' ಎಂದರು.
'ಸಿ.ಎಂ. ಬಿ.ಎಸ್.ಯಡಿಯೂರಪ್ಪ ಅವರಿಗೆ ಜಿಲ್ಲೆಯಲ್ಲಿ ಉಂಟಾದ ಹಾನಿಯ ಸಮಗ್ರ ಮಾಹಿತಿ ನೀಡಲಾಗುವುದು. ಅವರು ಸ್ಪಂದಿಸುವ ವಿಶ್ವಾಸವಿದೆ' ಎಂದರು.
'ಹಾನಿಗೊಳಗಾದ ಪ್ರದೇಶದಲ್ಲಿ ಪರಿಹಾರ ಕಾರ್ಯ ಯುದ್ಧೋಪಾದಿಯಲ್ಲಿ ನಡೆಯುತ್ತಿದೆ. ಹುಬ್ಬಳ್ಳಿ-ಅಂಕೋಲಾ ಹೆದ್ದಾರಿಯಲ್ಲಿ ಭಾರಿ ವಾಹನ ಸಂಚಾರಕ್ಕೆ ಅನುಕೂಲವಾಗಲು ಶೀಘ್ರ ತಾತ್ಕಾಲಿಕ ವ್ಯವಸ್ಥೆ ರೂಪಿಸಲಾಗುವುದು' ಎಂದರು.
ಉಪವಿಭಾಗಾಧಿಕಾರಿ ಆಕೃತಿ ಬನ್ಸಾಲ್, ತಹಶೀಲ್ದಾರ್ ಎಂ.ಆರ್.ಕುಲಕರ್ಣಿ, ಪ್ರಮುಖರಾದ ದ್ಯಾಮಣ್ಣ ದೊಡ್ಮನಿ, ಮಂಗಲಾ ನಾಯ್ಕ, ರೂಪಾ ನಾಯ್ಕ, ರಾಘವೇಂದ್ರ ನಾಯ್ಕ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.