ಮಂಗಳವಾರ, ಅಕ್ಟೋಬರ್ 26, 2021
26 °C

ಕಾರವಾರ: ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ವಿಶೇಷ ಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್, ನಗರದ ದೇವಿ ದೇವಸ್ಥಾನಗಳಿಗೆ ಸೋಮವಾರ ಭೇಟಿ ನೀಡಿದರು. ನಗರದ ಸಂತೋಷಿ ಮಾತಾ ಹಾಗೂ ಸದಾಶಿವಗಡದ ದುರ್ಗಾದೇವಿ ದೇವಸ್ಥಾನಗಳಿಗೆ ತೆರಳಿ ನವರಾತ್ರಿ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇಲ್ಲಿನ ದೇವಸ್ಥಾನಗಳಿಗೆ ಭೇಟಿ ನೀಡುವಂತೆ ಶಾಸಕಿ ರೂಪಾಲಿ ನಾಯ್ಕ ಹಾಗೂ ದೇವಸ್ಥಾನಗಳ ಭಕ್ತರು ಆಹ್ವಾನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಭೇಟಿ ನೀಡಿದ್ದೇನೆ’ ಎಂದರು.

‘ಗೋವಾದ ಮೂಲಕ ಅಂತರರಾಜ್ಯ ಸಂಚರಿಸುವವರಿಗೆ ಇರುವ ತೊಡಕುಗಳ ನಿವಾರಣೆಗೆ ಕ್ರಮಗಳ ಬಗ್ಗೆ ಪರಿಶೀಲಿಸಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಪ್ರವಾಸೋದ್ಯಮ ಚುರುಕು: ‘ಗೋವಾದಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳು ಆರಂಭವಾಗಿವೆ. ಕೇಂದ್ರ ಸರ್ಕಾರವು ದೇಶೀಯ ವಿಮಾನಗಳ ಸಂಚಾರಕ್ಕೆ ಅವಕಾಶ ನೀಡಿದೆ. ಅ.15ರಂದು ಅಂತರರಾಷ್ಟ್ರೀಯ ವಿಮಾನಗಳ ಹಾರಾಟ ಶುರುವಾಗುತ್ತದೆ’ ಎಂದೂ ಹೇಳಿದರು.

‘ಗೋವಾದಲ್ಲಿ ಕೋವಿಡ್ ಲಸಿಕೆಯ ಮೊದಲ ಡೋಸ್ ಪ್ರಗತಿ ಶೇ 100 ಆಗಿದೆ. ನವೆಂಬರ್ ಒಳಗೆ ಎರಡನೇ ಡೋಸ್‌ ಕೂಡ ‍ಪೂರ್ಣಗೊಳಿಸಲು ಪ್ರಯತ್ನಿಸುತ್ತಿದ್ದೇವೆ’ ಎಂದರು.

ಕಾರವಾರ– ಅಂಕೋಲಾ ಶಾಸಕಿ ರೂಪಾಲಿ ನಾಯ್ಕ, ಬಿ.ಜೆ.ಪಿ ಪ್ರಮುಖ ಗಣಪತಿ ಉಳ್ವೇಕರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು