ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಮದ್ಯ ವಶ

5

ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಮದ್ಯ ವಶ

Published:
Updated:
ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಮದ್ಯದ ಬಾಟಲಿಗಳನ್ನು ಭಟ್ಕಳ ರೈಲ್ವೆ ಇಲಾಖೆಯ ಆರ್‌ಪಿಎಫ್ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ.

ಭಟ್ಕಳ: ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಮದ್ಯದ ಬಾಟಲಿಗಳನ್ನು ಭಟ್ಕಳ ರೈಲ್ವೆ ಇಲಾಖೆಯ ಆರ್‌ಪಿಎಫ್ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ.

ಆರ್ಪಿಎಫ್‌ನ ಶಿಶುಪಾಲ್ ಸಿಂಗ್ ಹಾಗೂ ಹೇರಂಬ ನಾಯ್ಕ ಅವರು ಕಾರವಾರದಿಂದ ಭಟ್ಕಳಕ್ಕೆ ಬರುತ್ತಿದ್ದ ರೈಲು ತಪಾಸಣೆ ನಡೆಸುತ್ತಿದ್ದ ಸಂದಭದಲ್ಲಿ ಸಾಮಾನ್ಯ ದರ್ಜೆಯ ಬೋಗಿಯಲ್ಲಿ ನಾಲ್ಕು ಗೋಣಿ ಚೀಲದಲ್ಲಿ ತುಂಬಿ ಸಾಗಿಸುತ್ತಿದ್ದ ಗೋವಾ ರಾಜ್ಯದ ಸುಮಾರು ₨39 ಸಾವಿರ ಮೌಲ್ಯದ 312 ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ. ಮದ್ಯ ಸಾಗಿಸುತ್ತಿದ್ದ ಆರೋಪಿಗಳ ಪತ್ತೆಯಾಗಿಲ್ಲ. ಮದ್ಯದ ಬಾಟಲಿಗಳನ್ನು ಅಬಕಾರಿ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ.
 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !