ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಶಾಸ್ತ್ರೀಯ ಕಲೆಯ ಕಂಪು

Last Updated 23 ಅಕ್ಟೋಬರ್ 2019, 11:36 IST
ಅಕ್ಷರ ಗಾತ್ರ

ಶಿರಸಿ: ಸಂಗೀತ, ಯಕ್ಷಗಾನ ಕಾರ್ಯಕ್ರಮಗಳೊಂದಿಗೆ ದೆಹಲಿಯ ಗೋಕರ್ಣ ಮಂಡಳದ 40ನೇ ವಾರ್ಷಿಕೋತ್ಸವವು ದೆಹಲಿ ಕರ್ನಾಟಕ ಸಂಘದ ಸಹಯೋಗದಲ್ಲಿ ಇತ್ತೀಚೆಗೆ ನಡೆಯಿತು.

ಶಿರಸಿಯ ಪಂಡಿತ್ ಎಂ.ಪಿ.ಹೆಗಡೆ ಪಡಿಗೆರೆ ಅವರ ಶಾಸ್ತ್ರೀಯ ಗಾಯನ, ಕಾಶ್ಯಪ ಪ್ರತಿಷ್ಠಾನ ಗಡಿಗೆಹೊಳೆಯ ಮಹಿಳಾ ತಂಡದಿಂದ ‘ಸುಧನ್ವಾರ್ಜುನ ಕಾಳಗ’ ಯಕ್ಷಗಾನ ಪ್ರೇಕ್ಷಕರಿಗೆ ಮುದ ನೀಡಿತು.

ರಾಷ್ಟ್ರೀಯ ಸಂಸ್ಕೃತ ಸಂಸ್ಥಾನದ ಉಪಕುಲಪತಿ ಪ್ರೊ.ಪಿ.ಎನ್.ಶಾಸ್ತ್ರಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ‘ಗೋಕರ್ಣ ವಾಣಿ’ ಸ್ಮರಣ ಸಂಚಿಕೆಯನ್ನು ಅವರು ಬಿಡುಗಡೆಗೊಳಿಸಿದರು. ‘ಹವ್ಯಕ ಸಂಸ್ಕೃತಿ, ಸಂಪ್ರದಾಯ ಕಾಪಾಡಿಕೊಂಡು ಬರುವಲ್ಲಿ ಮಹಿಳೆಯರ ಪಾತ್ರ ಅಪಾರ. ಅವರಿಂದಲೇ ಹವ್ಯಕರು ಸಮಾಜದಲ್ಲಿ ಉತ್ತಮ ಸ್ಥಾನ ಪಡೆಯಲು ಸಾಧ್ಯವಾಗಿದೆ’ ಎಂದರು.

ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಡಾ. ವೆಂಕಟಾಚಲ ಹೆಗಡೆ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಪಟ್ಟಣ ಸೇರುತ್ತಿರುವ ಹವ್ಯಕರಿಗೆ ಊರಿನಲ್ಲಿರುವ ಕೃಷಿಭೂಮಿಯನ್ನು ನೋಡಲಾಗುತ್ತಿಲ್ಲ. ಇದಕ್ಕೆ ಪರ್ಯಾಯ ಮಾರ್ಗ ಕಂಡುಕೊಳ್ಳುವುದು ಅನಿವಾರ್ಯವಾಗಿದೆ’ ಎಂದರು.

ಕಾರ್ಯಕ್ರಮದ ಸಂಚಾಲಕ ನರಸಿಂಹ ಹೆಗಡೆ ಬಾಳೆಗದ್ದೆ, ಸ್ಮರಣ ಸಂಚಿಕೆಯ ಸಂಪಾದಕಿ ರೋಹಿಣಿ ಭಟ್, ಗೋಕರ್ಣ ಮಂಡಳದ ಅಧ್ಯಕ್ಷ ಡಾ.ಎಂ.ನಾರಾಯಣ ಭಟ್ಟ, ಖಜಾಂಚಿ ಲಲಿತಾ ಹೆಗಡೆ, ದೆಹಲಿ ಕರ್ನಾಟಕ ಸಂಘದ ಕಾರ್ಯದರ್ಶಿ ಸಿ.ಎಂ. ನಾಗರಾಜ್ ಇದ್ದರು. ರಾಮಚಂದ್ರ ಭಟ್ಟ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಸಾಧನೆ ಮಾಡಿದ 25 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಶಾಲಿನಿ ಪ್ರಶಾಂತ, ಪೂರ್ಣಿಮಾ ಹೆಗಡೆ ನಿರೂಪಿಸಿದರು. ಸತೀಶ ಹೆಗಡೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT