ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಭಾಷೆ, ಸಂಸ್ಕೃತಿ ವಿಕಾಸಕ್ಕೆ ಸರ್ಕಾರ ಬದ್ಧ: ಸಚಿವ ಶಿವರಾಮ ಹೆಬ್ಬಾರ

Last Updated 1 ನವೆಂಬರ್ 2021, 6:09 IST
ಅಕ್ಷರ ಗಾತ್ರ

ಕಾರವಾರ: 'ಉತ್ತರ ಕನ್ನಡ ಜಿಲ್ಲೆಯ ಜನತೆ ಅತ್ಯಂತ ಪ್ರಜ್ಞಾವಂತರು. ಈ ನೆಲದ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಎಂದೂ ಆರಾಧಿಸುವವರು. ಜಿಲ್ಲೆಯಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಸರ್ಕಾರ ವಿಶೇಷ ಗಮನಹರಿಸಿ ಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು.

ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಸೋಮವಾರ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

'ಇಲ್ಲಿನ ಸಂಸ್ಕೃತಿಗೆ ಧಕ್ಕೆಯಾಗದಂತೆ ಕನ್ನಡ ಭಾಷೆಯನ್ನು ಸದೃಢವಾಗಿ ಉಳಿಸಿ, ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ' ಎಂದರು.

'ನಾಡಿನ ಸಮೃದ್ಧಿ ಎಂದರೆ ಅದು ಅಭಿವೃದ್ಧಿಯ ಪ್ರತೀಕ. ಅದಕ್ಕೆ ಪೂರಕವಾಗಿ ಅಂದಿನಿಂದ ಇಂದಿನವರೆಗೆ ಆಳಿದ ಸರ್ಕಾರಗಳು ರಾಜ್ಯದ ಅಭಿವೃದ್ಧಿಗೆ ಅವುಗಳದ್ದೇ ಆದ ಕೊಡುಗೆ ನೀಡಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ನಮ್ಮ ಸರ್ಕಾರ ಕನ್ನಡ ನಾಡಿನ ಕಲೆ, ಸಂಸ್ಕೃತಿ, ಭಾಷೆ ನೆಲ, ಜಲ ಸಂರಕ್ಷಣೆ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಶ್ರಮಿಸುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಹಲವಾರು ಕನ್ನಡ ಪರ ಕಾರ್ಯಗಳನ್ನು ಮಾಡಲಾಗುತ್ತಿದೆ' ಎಂದು ಹೇಳಿದರು.

'ಅ.28ರಂದು ಲಕ್ಷ ಕಂಠಗಳ ಗೀತಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಜಿಲ್ಲೆಯಲ್ಲಿ ಸುಮಾರು 35 ಸಾವಿರ ಜನ ಭಾಗವಹಿಸಿದ್ದರು. ಕನ್ನಡದ ಗೌರವ ಹೆಚ್ಚಿಸುವ ಕೆಲಸಗಳಿಗೆ ವಿಶೇಷ ಅನುದಾನ ಮೀಸಲಿರಿಸಲಾಗಿದೆ. ಕನ್ನಡ ಭಾಷೆ, ನಾಡು ನುಡಿ ಸಂರಕ್ಷಣೆಗೆ ನಮ್ಮ ಸರ್ಕಾರ ವಿಶೇಷ ಆದ್ಯತೆ ನೀಡಿದೆ' ಎಂದರು.

ಶಾಸಕಿ ರೂಪಾಲಿ ನಾಯ್ಕ, ನಗರಸಭೆ ಅಧ್ಯಕ್ಷ ಡಾ.ನಿತಿನ್ ಪಿಕಳೆ, ಉಪಾಧ್ಯಕ್ಷ ಪ್ರಕಾಶ ಪಿ.ನಾಯ್ಕ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಪ್ರಿಯಾಂಗಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಕೆ.ಕೃಷ‌್ಣಮೂರ್ತಿ ವೇದಿಕೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT