ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚಾಯ್ತಿ ವಿರುದ್ಧ ಪ್ರತಿಭಟನೆ

Last Updated 19 ಡಿಸೆಂಬರ್ 2018, 12:06 IST
ಅಕ್ಷರ ಗಾತ್ರ

ಶಿರಸಿ: ಕುಡಿಯುವ ನೀರು ಸಮರ್ಪಕ ಸರಬರಾಜು, ಬೀದಿ ಸ್ವಚ್ಛತೆಗೆ ಒತ್ತಾಯಿಸಿ, ತಾಲ್ಲೂಕಿನ ಬನವಾಸಿ ಗ್ರಾಮ ಪಂಚಾಯ್ತಿ ಸದಸ್ಯ ಶಿವಣ್ಣ ಚೆನ್ನಯ್ಯ ಅವರು ಬುಧವಾರ ಪಂಚಾಯ್ತಿ ಎದುರು ಪ್ರತಿಭಟನೆ ಕುಳಿತಿದ್ದರು.

‘ನನ್ನ ವಾರ್ಡ್‌ನಲ್ಲಿ ಮೂಲ ಸೌಕರ್ಯಗಳ ಕೊರತೆಯಿದೆ. ನಿತ್ಯ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಬೀದಿದೀಪಗಳು ಹಾಳಾಗಿ ತಿಂಗಳು ಕಳೆದಿದೆ. ಈ ಬಗ್ಗೆ ಗಮನ ಸೆಳೆದರೂ ಅಧ್ಯಕ್ಷರು ಸ್ಪಂದಿಸುತ್ತಿಲ್ಲ. ಬನವಾಸಿಯ ಬೀದಿಯಲ್ಲಿ ಅಶುದ್ಧತೆ ತಾಂಡವವಾಡುತ್ತಿದೆ. ಸ್ವಚ್ಛ ಭಾರತ ಅಭಿಯಾನ ಇಲ್ಲಿ ಕನಸಾಗಿದೆ. ಹೀಗಾಗಿ, ಜನಪ್ರತಿನಿಧಿಯಾಗಿದ್ದರೂ ಸಹ, ಪ್ರತಿಭಟನೆ ನಡೆಸುವ ಅನಿವಾರ್ಯತೆ ಬಂತು’ ಎಂದು ಅವರು ಹೇಳಿದರು. ಅಧ್ಯಕ್ಷರು ಪಕ್ಷ ರಾಜಕಾರಣ ಮಾಡುವುದನ್ನು ಬಿಟ್ಟು, ಅಭಿವೃದ್ಧಿ ಆಧಾರಿತ ರಾಜಕಾರಣ ಮಾಡಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT