ಸೋಮವಾರ, ಆಗಸ್ಟ್ 8, 2022
23 °C

ಸ್ವಾಭಿಮಾನಕ್ಕೆ ಧಕ್ಕೆ ಬಂದಿದ್ದಕ್ಕೆ ರಾಜೀನಾಮೆ: ಪ್ರವೀಣ ಹೆಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ‘ಕಾಂಗ್ರೆಸ್ ಪಕ್ಷದಲ್ಲಿ ಕೆಲಸ ಮಾಡುವ ವೇಳೆ ಸ್ವಾಭಿಮಾನಕ್ಕೆ ಧಕ್ಕೆ ಬಂದ ಕಾರಣ ಕಿಸಾನ್ ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಸ್ಥಾನ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ’ ಎಂದು ಕೊಡ್ನಗದ್ದೆ ಗ್ರಾಮ ಪಂಚಾಯ್ತಿ ಸದಸ್ಯ ಪ್ರವೀಣ ಹೆಗಡೆ ಮಣ್ಮನೆ ಹೇಳಿದರು.

ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜು.5 ರಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಳ್ಳುವೆ’ ಎಂದು ತಿಳಿಸಿದರು.

‘ಹದಿನೆಂಟು ವರ್ಷದಿಂದ ಕಾಂಗ್ರೆಸ್ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೆ. ಈಚೆಗೆ ಪಕ್ಷದ ಒಳಗೆ ವಾತಾವರಣ ಹದಗೆಡುತ್ತಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಮುಳುಗುವ ಹಡಗಾಗಿದೆ. ವಸ್ತುಸ್ಥಿತಿಯನ್ನು ಶಾಸಕ ಆರ್.ವಿ.ದೇಶಪಾಂಡೆ ಗಮನಕ್ಕೂ ತಂದು ಅಲ್ಲಿಂದ ಹೊರಬಂದಿದ್ದೇನೆ’ ಎಂದರು.

‘ರಾಜೀನಾಮೆ ನೀಡಿದ ಬಳಿಕವೂ ಕೆಲವು ಸ್ವಘೋಷಿತ ಮುಖಂಡರು ತಮ್ಮ ವಿರುದ್ಧ ಅನಗತ್ಯ ಆರೋಪ ಹೊರಿಸುತ್ತಿದ್ದಾರೆ. ಆರೋಪಗಳನ್ನು ಸಾಕ್ಷಿ ಸಮೇತ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ’ ಎಂದು ಸವಾಲೆಸೆದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು