ಮಂಗಳವಾರ, ಸೆಪ್ಟೆಂಬರ್ 28, 2021
22 °C

ಕಾರವಾರ: ಭಾರಿ ಮಳೆ, ಎರಡು ದಿನ 'ಆರೆಂಜ್ ಅಲರ್ಟ್'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆ ಶನಿವಾರ ತಡರಾತ್ರಿಯಿಂದ ಜೋರಾಗಿ ಮಳೆಯಾಗುತ್ತಿದೆ. ಎರಡು ದಿನಗಳಿಂದ ಬಿಟ್ಟು ಬಿಟ್ಟು ಬರುತ್ತಿದ್ದ ವರ್ಷಧಾರೆಯು, ನಿರಂತರವಾಗಿ ಬೀಳುತ್ತಿದೆ.

ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ ಹಮಾವಾನ ಇಲಾಖೆ ಮುನ್ಸೂಚನೆ ನೀಡಿದೆ. ಎರಡೂ ದಿನಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಿದೆ. ಹಾಗಾಗಿ, ಸಾರ್ವಜನಿಕರು, ಅದರಲ್ಲೂ ಮಕ್ಕಳು ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳು, ಕಟ್ಟಡಗಳು, ವಿದ್ಯುತ್ ಕಂಬಗಳ ಬಳಿ ನಿಲ್ಲಬಾರದು. ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ಪ್ರವಾಸಿಗರು ಸಮುದ್ರಕ್ಕೆ ಇಳಿಯುವಾಗ ಬಹಳ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.

ತುರ್ತು ಸೇವೆಗೆ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿ ಟೋಲ್ ಫ್ರೀ ಸಂಖ್ಯೆ: 1077 ಅಥವಾ ವಾಟ್ಸ್‌ಆ್ಯಪ್ ಸಂಖ್ಯೆ: 94835 11015 ಸಂಪರ್ಕಿಸಬಹುದು ಎಂದು ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು