ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರವಾರ: ಗಾಳಿ, ಗುಡುಗು ಸಹಿತ ಉತ್ತಮ ಮಳೆ

Last Updated 2 ಜೂನ್ 2020, 6:18 IST
ಅಕ್ಷರ ಗಾತ್ರ
ADVERTISEMENT
""

ಕಾರವಾರ: ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬೆಳಿಗ್ಗೆಯಿಂದ ಗುಡುಗು ಸಹಿತ ಜೋರಾಗಿ ಮಳೆ ಸುರಿಯುತ್ತಿದೆ. ಆಗಸದಲ್ಲಿ ದಟ್ಟವಾದ ಕಾರ್ಮೋಡ ಕವಿದಿದೆ.

ಬೆಳಿಗ್ಗೆಯಿಂದಲೂ ಜೋರಾಗಿ ಗಾಳಿ ಬೀಸುತ್ತಿತ್ತು. ಆಗಾಗ ಬಿಸಿಲು ಕಾಣಿಸಿಕೊಂಡು ಮರೆಯಾಗುತ್ತಿತ್ತು. ಸೋಮವಾರ ಸಂಜೆಯೂ ನಗರದಲ್ಲಿ ಉತ್ತಮ ಮಳೆಯಾಗಿದೆ.

ಉತ್ತರ ಕನ್ನಡದಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಈಗಾಗಲೇ ಶುರುವಾಗಿವೆ. ಭತ್ತದ ವ್ಯವಸಾಯ ಮಾಡುವವರು ಹೊಲಗಳನ್ನು ಉಳುಮೆ ಬಿತ್ತನೆಗೆ ಸಿದ್ಧತೆ ಆರಂಭಿಸಿದ್ದಾರೆ. ಅಡಿಕೆ ತೋಟಗಳಿಗೆ ಔಷಧ ಸಿಂಪಡಿಸಲು ಅಗತ್ಯವಾದ ಮೈಲುತುತ್ತ ಹಾಗೂ ಸುಣ್ಣವನ್ನು ಸಂಗ್ರಹಿಸಲು ಕೃಷಿಕರು ಮುಂದಾಗಿದ್ದಾರೆ.

ಈ ಬಾರಿ ಮುಂಗಾರು ವಾಡಿಕೆಯಂತೆ ಶುರುವಾಗಲಿದೆ ಮತ್ತು ಉತ್ತಮವಾಗಿ ಮಳೆ ಬೀಳಲಿದೆ ಎಂಬ ಮುನ್ಸೂಚನೆ ರೈತರ ಸಂತಸಕ್ಕೆ ಕಾರಣವಾಗಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಗಂಟೆಗೆ ಗರಿಷ್ಠ 80 ಕಿಲೋಮೀಟರ್ ನಷ್ಟು ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗಾಗಿ ಮೀನುಗಾರರು ಕಡಲಿಗೆ ಹೋಗಬಾರದು ಎಂದು ಎಚ್ಚರಿಕೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT