ಶನಿವಾರ, ಮಾರ್ಚ್ 25, 2023
25 °C

ಉತ್ತರ ಕನ್ನಡ: ಜಿಲ್ಲಾದ್ಯಂತ ಮುಂದುವರಿದ ಮಳೆ, ಧರೆಗುರುಳಿದ ಬೃಹತ್ ಮರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಕಾರವಾರ: ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ಜೋರು ಮಳೆ ಮುಂದುವರಿದಿದೆ. ಕುಮಟಾದ ಐ.ಸಿ.ಐ.ಸಿ ಬ್ಯಾಂಕ್ ಪಕ್ಕದ ಬೃಹತ್ ಆಲದ ಮರ ಮಂಗಳವಾರ ಬೆಳಗಿನ ಜಾವ ಧರೆಗುರುಳಿತು. 

ಇದರಿಂದ ಹಲವು ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತು. ಬೆಳಗಿನ ಜಾವ ಮರ ಬಿದ್ದ ಕಾರಣ, ಯಾರಿಗೂ ಯಾವುದೇ ವಾಹನಗಳಿಗೂ ಹಾನಿಯಾಗಿಲ್ಲ. ನಂತರ ಪುರಸಭೆ ನೌಕರರು, ಅಗ್ನಿ ಶಾಮಕದಳದ ಸಿಬ್ಬಂದಿ ಮರವನ್ನು ತೆರವು ಮಾಡಿದರು.

ಅರಬ್ಬಿ ಸಮುದ್ರ ಮತ್ತಷ್ಟು ಪ್ರಕ್ಷುಬ್ಧಗೊಂಡಿದ್ದು, ಭಾರಿ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಕಾರವಾರದ ದೇವಭಾಗ, ರವೀಂದ್ರನಾಥ ಟ್ಯಾಗೋರ್ ಕಡಲತೀರ, ಹೊನ್ನಾವರದ ವಿವಿಧೆಡೆ ಕಡಲ್ಕೊರೆತ ತೀವ್ರಗೊಂಡಿದೆ.

ಮಲೆನಾಡಿನಲ್ಲಿ ಮುಂಗಾರು ಚುರುಕಾಗಿದ್ದು, ಶಿರಸಿ, ಯಲ್ಲಾಪುರ, ಸಿದ್ದಾಪುರ ಮುಂತಾದೆಡೆ ಮಳೆ ಮುಂದುವರಿದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು