ಉತ್ತರ ಕನ್ನಡದಲ್ಲಿ ಮಳೆ ಅಬ್ಬರ: ಶಾಲಾ ಕಾಲೇಜುಗಳಿಗೆ ಇಂದು ರಜೆ

ಕಾರವಾರ: ಭಾರಿ ಮಳೆಯ ಕಾರಣ ಉತ್ತರ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢಶಾಲೆಗಳು, ಪದವಿಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಉಡುಪಿಯಲ್ಲಿ ಭಾರಿ ಮಳೆ: ಶಾಲಾ ಕಾಲೇಜುಗಳಿಗೆ ರಜೆ
ಉತ್ತರ ಕನ್ನಡದಾದ್ಯಂತ ಸೋಮವಾರ ರಾತ್ರಿಯಿಂದ ಭಾರಿ ಮಳೆಯಾಗುತ್ತಿದೆ. ಮಂಗಳವಾರ ಬೆಳಿಗ್ಗೆಯೂ ದಟ್ಟವಾಗಿ ಮೋಡ ಕವಿದಿದ್ದು, ವರ್ಷಧಾರೆ ಮುಂದುವರಿದಿದೆ. ಹಲವು ನದಿಗಳು ಹಾಗೂ ಹಳ್ಳಗಳು ಭರ್ತಿಯಾಗಿ ಹರಿಯುತ್ತಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.