ಶುಕ್ರವಾರ, ಸೆಪ್ಟೆಂಬರ್ 17, 2021
24 °C

ಅರಬೈಲ್ ಘಟ್ಟದಲ್ಲಿ ಹೆದ್ದಾರಿ ತಾತ್ಕಾಲಿಕ ದುರಸ್ತಿ; ಪ್ರಾಯೋಗಿಕವಾಗಿ ವಾಹನ ಸಂಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲ್ಲಾಪುರ: ಜುಲೈ 23ರಂದು ಸುರಿದ ಭಾರಿ ಮಳೆಗೆ ತಾಲ್ಲೂಕಿನ ಅರಬೈಲ್ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿ 63ರ ಅಂಚು ಕುಸಿದು ಬಿದ್ದು, ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಅದರ ತಾತ್ಕಾಲಿಕ ದುರಸ್ತಿ ಮಾಡಲಾಗಿದ್ದು, ಪ್ರಾಯೋಗಿಕವಾಗಿ ಭಾರಿ ವಾಹನಗಳ ಸಂಚಾರಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು, ರಸ್ತೆ ಕುಸಿದ ಇನ್ನೊಂದು ಬದಿಯಿಂದ ಗುಡ್ಡ ಕೊರೆದು ರಸ್ತೆ ನಿರ್ಮಾಣ ಮಾಡಿದೆ. ಇದರಲ್ಲಿ ಭಾರಿ ವಾಹನಗಳ ಸಂಚಾರವನ್ನು ಮಂಗಳವಾರ ಪ್ರಾಯೋಗಿಕವಾಗಿ ನಡೆಸಲಾಯಿತು. ಪೂರ್ಣ ಪ್ರಮಾಣದಲ್ಲಿ ವಾಹನಗಳ ಸಂಚಾರಕ್ಕೆ ಜಿಲ್ಲಾಧಿಕಾರಿಯ ಅನುಮತಿಗಾಗಿ ಕಾಯಲಾಗುತ್ತಿದೆ. ಬುಧವಾರದಿಂದ ಭಾರಿ ವಾಹನಗಳ ಸಂಚಾರ ಆರಂಭವಾಗುವ ನಿರೀಕ್ಷೆಯಿದೆ.

ಈ ಕುರಿತು ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ತಹಶೀಲ್ದಾರ್ ಶ್ರೀಕೃಷ್ಣ ಕಾಮಕರ್, ‘ವಾಹನ ಸಂಚಾರಕ್ಕೆ ರಸ್ತೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಮಂಗಳವಾರ ಪ್ರಾಯೋಗಿಕವಾಗಿ ವಾಹನಗಳ ಸಂಚಾರ ಮಾಡಲಾಗಿದೆ. ಜಿಲ್ಲಾಧಿಕಾರಿಯ ಅನುಮತಿ ನಿರೀಕ್ಷಿಸಲಾಗುತ್ತಿದ್ದು, ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ವಾಹನ ಸಂಚಾರಕ್ಕೆ ಅವಕಾಶ ಸಿಗಬಹುದು’ ಎಂದರು.

ಈ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಆರಂಭವಾದರೆ 13 ದಿನಗಳಿಂದ ಸಾಲುಗಟ್ಟಿ ನಿಂತಿದ್ದ ವಾಹನಗಳ ಚಾಲಕರು ನಿಟ್ಟುಸಿರು ಬಿಡುವಂತಾಗಲಿದೆ. ಅಲ್ಲದೇ ಕರಾವಳಿ ಮತ್ತು ಮಲೆನಾಡಿನ ನಡುವೆ ಸರಕು ಸಾಗಣೆಯೂ ಸುಗಮವಾಗಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು