ಸೋಮವಾರ, ಜುಲೈ 13, 2020
29 °C

ಉತ್ತರ ಕನ್ನಡ | ವಿದ್ಯುತ್ ಕಾಯ್ದೆಗೆ ತಿದ್ದುಪಡಿ ವಿರುದ್ಧ ಕರಾಳ ದಿನಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ಕೇಂದ್ರ ಸರ್ಕಾರವು 2003ರ ವಿದ್ಯುತ್ ಕಾಯ್ದೆಗೆ ಮಾಡಲು ಉದ್ದೇಶಿಸಿರುವ ತಿದ್ದುಪಡಿಯನ್ನು ರದ್ದುಗೊಳಿಸಬೇಕು. ಈ ವಲಯದ ಖಾಸಗೀಕರಣ ಕೈಬಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ವಿದ್ಯುತ್ ಸರಬರಾಜು ಕಂಪನಿಗಳ ಗುತ್ತಿಗೆ ನೌಕರರ ಸಂಘ ಹಾಗೂ ಹೆಸ್ಕಾಂ ಗುತ್ತಿಗೆ ನೌಕರರ ಸಂಘದ ಸದಸ್ಯರು ಸೋಮವಾರ ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದರು.

ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ದೇಶದಾದ್ಯಂತ ಎ.ಐ.ಯು.ಟಿ.ಯು.ಸಿ ನೇತೃತ್ವದಲ್ಲಿ ಕರಾಳ ದಿನಾಚರಣೆ ಮಾಡಲಾಯಿತು. ಇದೇ ರೀತಿ, ಕಾರವಾರದಲ್ಲೂ ನೌಕರರು, ಗುತ್ತಿಗೆ ಕಾರ್ಮಿಕರು, ಪ್ರಸರಣ, ಸರಬರಾಜು ಸ್ಟೇಷನ್‌ಗಳ ಮತ್ತು ಕಚೇರಿಗಳಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಸೂಚಿಸಲಾಯಿತು. ಇದೇವೇಳೆ, ಕಾರ್ಯ ಪಾಲಕ ಎಂಜಿನಿಯರ್ ಮೂಲಕ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಹಾಗೂ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಏಪ್ರಿಲ್ ತಿಂಗಳಿನಿಂದ ಪರಿಷ್ಕೃತ ಕನಿಷ್ಠ ವೇತನ ಜಾರಿ ಮಾಡಬೇಕು. ಲಾಕ್‌ಡೌನ್ ಅವಧಿಯಲ್ಲಿ ಹೆಚ್ಚುವರಿ ವೇತನ ನೀಡಬೇಕು. ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಬೇಕು. ಪಿ.ಎಫ್.ನಲ್ಲಿ ನೌಕರರ ಪಾಲಿನ ಕಂತು ಕಡಿತಗೊಳಿಸದೇ ವೇತನದಲ್ಲಿ ಸೇರಿಸಿ ಪಾವತಿಸಬೇಕು. ಎಲ್ಲ ಗುತ್ತಿಗೆ ನೌಕರರ ಸೇವೆಯನ್ನು ಕಾಯಂಗೊಳಿಸಬೇಕು ಹಾಗೂ ಗುತ್ತಿಗೆ ಕಾರ್ಮಿಕರನ್ನು ವಜಾಗೊಳಿಸಬಾರದು ಎಂಬ ಬೇಡಿಕೆಯನ್ನೂ ಸಲ್ಲಿಸಲಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.