ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂದರು ಅಭಿವೃದ್ಧಿ ಯೋಜನೆ ಪ್ರಶ್ನಿಸಿದ ಅರ್ಜಿ ವಿಲೇವಾರಿ

Last Updated 25 ನವೆಂಬರ್ 2021, 2:03 IST
ಅಕ್ಷರ ಗಾತ್ರ

ಬೆಂಗಳೂರು: ‘ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಬಂದರು ಪ್ರದೇಶದ ವಿಸ್ತರಣೆ ಮತ್ತು ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದಂತೆ, ಹೊನ್ನಾವರ ತಾಲ್ಲೂಕು ಹಸಿ ಮೀನು ವ್ಯಾಪಾರಸ್ಥರ ಸಂಘದ ಕುಂದುಕೊರತೆ ಆಲಿಸಿ ಸೂಕ್ತ ಆದೇಶ ಹೊರಡಿಸಿ’ ಎಂದು ರಾಜ್ಯ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗೆ ಹೈಕೋರ್ಟ್‌ ನಿರ್ದೇಶಿಸಿದೆ.

ಈ ಸಂಬಂಧಹೊನ್ನಾವರ ತಾಲ್ಲೂಕು ಹಸಿ ಮೀನು ವ್ಯಾಪಾರಸ್ಥರ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿ ವಿಲೇವಾರಿ ಮಾಡಿದೆ.

‘ಯೋಜನೆಗೆ ಸಂಬಂಧಿಸಿದಂತೆ ಅರ್ಜಿದಾರರು ತಮ್ಮ ಕುಂದುಕೊರತೆಗಳನ್ನು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮನವಿ ರೂಪದಲ್ಲಿ ಸಲ್ಲಿಸಬೇಕು. ಇಲಾಖೆಯು ಕುಂದುಕೊರತೆ ಆಲಿಸಿ ಕಾನೂನು ಪ್ರಕಾರ ಸೂಕ್ತ ಆದೇಶ ಹೊರಡಿಸಬೇಕು’ ಎಂದು ನ್ಯಾಯಪೀಠ ನಿರ್ದೇಶಿಸಿದೆ.

ಅರ್ಜಿದಾರರ ಕೋರಿಕೆ: ‘ಉದ್ದೇಶಿತ ಯೋಜನೆಯ ಸ್ಥಳದಲ್ಲಿ ಆಮೆ ವಲಯವಿದೆ. ಬಂದರು ಅಭಿವೃದ್ಧಿ ಕಾಮಗಾರಿಯಿಂದ ಅವುಗಳಿಗೆ ತೊಂದರೆ ಆಗುತ್ತದೆ. ಅಂತೆಯೇ, ಸ್ಥಳೀಯ ಮೀನುಗಾರರ ಜೀವನಾಧಾರಕ್ಕೂ ಧಕ್ಕೆ ಉಂಟಾಗುತ್ತದೆ. ಆದ್ದರಿಂದ, ಯೋಜನೆಯನ್ನು ತಡೆಹಿಡಿಯಬೇಕು ಮತ್ತು ಯೋಜನೆಗೆ ನೀಡಲಾಗಿರುವ ಪರಿಸರ ನಿರಾಕ್ಷೇಪಣಾ ಪತ್ರ ರದ್ದುಪಡಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT