ಶುಕ್ರವಾರ, ಮಾರ್ಚ್ 24, 2023
31 °C
ಗೋಕರ್ಣದ ಭದ್ರಕಾಳಿ, ಮಹಾಗಣಪತಿ ಮಂದಿರ

ದೇವಸ್ಥಾನ ಆಡಳಿತ ಸಮಿತಿ ಆಯ್ಕೆಗೆ ಹೈಕೋರ್ಟ್ ತಡೆಯಾಜ್ಞೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೋಕರ್ಣ: ಧಾರ್ಮಿಕ ಕ್ಷೇತ್ರ ಗೋಕರ್ಣದ ಪುರಾಣ ಪ್ರಸಿದ್ಧ ಭದ್ರಕಾಳಿ ಮತ್ತು ಮಹಾಗಣಪತಿ ಮಂದಿರದ ನೂತನ ಆಡಳಿತ ಸಮಿತಿ ಆಯ್ಕೆ ಪ್ರಕ್ರಿಯೆಗೆ ಹೈಕೋರ್ಟ್‌ನ ಧಾರವಾಡದ ಏಕಸದಸ್ಯ ಪೀಠ ಮಂಗಳವಾರ ತಡೆಯಾಜ್ಞೆ ನೀಡಿದೆ.

ರಾಜ್ಯ ಸರ್ಕಾರದ ಧಾರ್ಮಿಕ ಪರಿಷತ್, ಎರಡೂ ದೇವಸ್ಥಾನಗಳಿಗೆ ಆಡಳಿತ ಸಮಿತಿಯ ಸದಸ್ಯರನ್ನು ನೇಮಕ ಮಾಡಲು ಏ.6ರಂದು ಆಯ್ಕೆ ಪ್ರಕ್ರಿಯೆ ನಡೆಸಿತ್ತು. ಇದರ ವಿರುದ್ಧ ಎರಡೂ ದೇವಸ್ಥಾನಗಳ ಧರ್ಮದರ್ಶಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.

ಧರ್ಮದರ್ಶಿಗಳ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಸೂರಜ್ ಗೋವಿಂದರಾಜ್, ಕಳೆದ ವಾರವೇ ಆಯ್ಕೆಯಾದ ಸಮಿತಿಯ ಸದಸ್ಯರ ಪಟ್ಟಿಯನ್ನು ಪ್ರಕಟಿಸದಂತೆ ಆದೇಶಿಸಿದ್ದರು. ಮಂಗಳವಾರ ಪುನಃ ವಿಚಾರಣೆ ನಡೆಸಿದ ನ್ಯಾಯಾಧೀಶರು, ಎರಡೂ ದೇವಸ್ಥಾನಗಳ ಆಡಳಿತ ಸಮಿತಿಯ ಸಂಪೂರ್ಣ ಆಯ್ಕೆ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ ಆದೇಶಿಸಿದ್ದಾರೆ.

ಧರ್ಮದರ್ಶಿಗಳ ಪರ ಶಿರಸಿಯ ಹಿರಿಯ ವಕೀಲ ಅರಣಾಚಲ ಹೆಗಡೆ ವಾದ ಮಂಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು