ಗುರುವಾರ , ಸೆಪ್ಟೆಂಬರ್ 16, 2021
29 °C
ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಎಚ್ಚರಿಕೆ

ಹೆದ್ದಾರಿ ಶೀಘ್ರ ಪೂರ್ಣಗೊಳಿಸದಿದ್ದರೆ ಕ್ರಮ; ವಿಶ್ವೇಶ್ವರ ಹೆಗಡೆ ಕಾಗೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ‘ನಿಗದಿತ ಕಾಲಮಿತಿಯೊಳಗೆ ಶಿರಸಿ–ಕುಮಟಾ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸದಿದ್ದರೆ ಗುತ್ತಿಗೆ ಪಡೆದ ಕಂಪನಿ ವಿರುದ್ಧ ಕ್ರಮಕೈಗೊಳ್ಳಲಾಗುವುದು’ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಎಚ್ಚರಿಸಿದರು.

ಇಲ್ಲಿನ ಮಿನಿವಿಧಾನಸೌಧದಲ್ಲಿ ಬುಧವಾರ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅತಿವೃಷ್ಟಿಗೆ ನಿರ್ಮಾಣ ಹಂತದ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಭಾರಿ ವಾಹನಗಳ ಸಂಚಾರದಿಂದ ಹೆದ್ದಾರಿ ಓಡಾಟಕ್ಕೆ ಬಳಕೆಯಾಗದಂತಾಯಿತು. ಅದನ್ನು ಸರಿಪಡಿಸಲು ತಕ್ಷಣವೇ ಸೂಚಿಸಿದ್ದೇನೆ’ ಎಂದರು.

‘ಕಾಮಗಾರಿಗೆ ವೇಗ ನೀಡುವ ನಿಟ್ಟಿನಲ್ಲಿ ಈ ರಸ್ತೆಯನ್ನು ಧಾರವಾಡ ಕಚೇರಿ ವ್ಯಾಪ್ತಿಯ ಬದಲು ಮಂಗಳೂರಿ ಹೆದ್ದಾರಿ ಪ್ರಾಧಿಕಾರದ ಕಚೇರಿಗೆ ವರ್ಗಾಯಿಸಲಾಗಿದೆ’ ಎಂದರು.

‘ಅತಿವೃಷ್ಟಿಗೆ ಹಾಳಾದ ತೋಟ, ಗದ್ದೆ ಪುನಶ್ಚೇತನಕ್ಕೆ ನರೇಗಾ ಯೋಜನೆ ಅನ್ವಯಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೆ. ಅದಕ್ಕೆ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದರು.

‘ಅತಿವೃಷ್ಟಿಯಿಂದಾಗಿ ತಾಲ್ಲೂಕಿನಲ್ಲಿ ₹30 ಕೋಟಿ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ನಿಖರ ಸಮೀಕ್ಷೆ ನಡೆಸಿ ಸೂಕ್ತ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮನೆ ಹಾನಿಗೆ ಸಂಬಂಧಿಸಿದಂತೆ ಈಗಾಗಲೆ ₹36 ಲಕ್ಷ ಪರಿಹಾರವನ್ನು ಸಂತ್ರಸ್ತರ ಖಾತೆಗೆ ಜಮಾ ಮಾಡಲಾಗಿದೆ’ ಎಂದರು.

‘ತಾಲ್ಲೂಕಿನ 8 ಕಡೆ ಕೋವಿಡ್‌ ಆರೈಕೆ ಕೇಂದ್ರ ತೆರೆಯಲು ಸ್ಥಳ ಗುರುತಿಸಲಾಗಿದೆ. ಮೂರನೇ ಅಲೆ ನಿಯಂತ್ರಣದ ಕುರಿತು ಜಾಗೃತಿ ಮೂಡಿಸಲು ಸೂಚಿಸಿದ್ದೇನೆ’ ಎಂದರು.

ತಹಶೀಲ್ದಾರ್‌ ಎಂ.ಆರ್.ಕುಲಕರ್ಣಿ, ತಾಲ್ಲೂಕು ಪಂಚಾಯ್ತಿ ಇಒ ಎಫ್.ಜಿ.ಚೆನ್ನಣ್ಣನವರ್, ತಾಲ್ಲೂಕು ಆರೋಗ್ಯಾಧಿಕಾರಿ ವಿನಾಯಕ ಭಟ್ಟ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು