ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಕನ್ನಡ: ಕರಾವಳಿಯ ಶಾಲಾ ಕಾಲೇಜುಗಳಿಗೆ ಇಂದು ರಜೆ

Last Updated 25 ಅಕ್ಟೋಬರ್ 2019, 14:44 IST
ಅಕ್ಷರ ಗಾತ್ರ

ಕಾರವಾರ: ಜಿಲ್ಲೆಯ ಕರಾವಳಿಯ ಭಾಗದಲ್ಲಿ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಹಾಗಾಗಿಈ ಭಾಗದಐದು ತಾಲ್ಲೂಕುಗಳಾದ ಕಾರವಾರ, ಅಂಕೋಲಾ,ಕುಮಟಾ, ಹೊನ್ನಾವರ ಮತ್ತು ಭಟ್ಕಳದ ಎಲ್ಲ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ ಘೋಷಿಸಲಾಗಿದೆ.

ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೂ (ಘಟ್ಟದ ಮೇಲಿನ ತಾಲ್ಲೂಕುಗಳನ್ನೂ ಒಳಗೊಂಡು) ರಜೆ ಘೋಷಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಶುಕ್ರವಾರ ಆದೇಶಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಶನಿವಾರದ ತರಗತಿಯನ್ನು ಬೇರೊಂದು ದಿನ ಸರಿದೂಗಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಶಿಕ್ಷಣ ಇಲಾಖೆ ಪ್ರಭಾರ ಉಪ ನಿರ್ದೇಶಕಎನ್.ಜಿ.ನಾಯಕ್ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT