ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣಪತಿಗೆ ‘ಹೊಸ್ತೋಟ’, ಪಾದೇಕಲ್ಲಗೆ ‘ದಂಟ್ಕಲ್’ ಪ್ರಶಸ್ತಿ

Last Updated 23 ಆಗಸ್ಟ್ 2022, 16:13 IST
ಅಕ್ಷರ ಗಾತ್ರ

ಶಿರಸಿ:ಸೋಂದಾ ಸ್ವರ್ಣವಲ್ಲಿ ಮಠದ ಅಂಗ ಸಂಸ್ಥೆಯಾದ ಯಕ್ಷ ಶಾಲ್ಮಲಾ‌ ವತಿಯಿಂದ ಯಕ್ಷೃಷಿ ಮಂಜುನಾಥ ಭಾಗವತ ಹೊಸ್ತೋಟ ಅವರ ಹೆಸರಿನಲ್ಲಿ ನೀಡುವ ಪ್ರಶಸ್ತಿಯನ್ನು ಮೂಲಕ ಭಾಗವತ ಗಣಪತಿ ಭಟ್ಟ ಮೊಟ್ಟೆಗದ್ದೆ ಹಾಗೂ ಪ್ರೊ.ಎಂ.ಎ.ಹೆಗಡೆ‌ ದಂಟ್ಕಲ್ ಹೆಸರಿನಲ್ಲಿ ನೀಡುವ ಪ್ರಶಸ್ತಿಯನ್ನು ಯಕ್ಷಗಾನದ ವಿದ್ವಾಂಸ ಪಾದೇಕಲ್ಲು ವಿಷ್ಣು ಭಟ್ಟ ಅವರಿಗೆ ನೀಡಲು ನಿರ್ಧರಿಸಲಾಗಿದೆ.

ಆಗಸ್ಟ್ ಕೊನೆಯಲ್ಲಿ ಮಠದಲ್ಲಿ ನಡೆಯುವ ಎರಡು‌‌ ದಿನಗಳ ಯಕ್ಷೋತ್ಸವ ಕಾರ್ಯಕ್ರಮದಲ್ಲಿ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು‌ ಯಕ್ಷ ಶಾಲ್ಮಲಾ ಸಂಸ್ಥೆಯ ಕಾರ್ಯದರ್ಶಿ ನಾಗರಾಜ‌ ಜೋಶಿ ಸೋಂದಾ ತಿಳಿಸಿದ್ದಾರೆ.‌

ಯಲಾಪುರ ತಾಲ್ಲೂಕು ಮೊಟ್ಟೆಗದ್ದೆಯ ಗಣಪತಿ ಭಟ್ಟ ಅವರು ವೈದಿಕ ಮತ್ತು ಬಡಗುತಿಟ್ಟಿನ ಪ್ರಸಿದ್ಧ ಭಾಗವತರಲ್ಲಿ ಒಬ್ಬರಾಗಿದ್ದು, ಬಡಗುತಿಟ್ಟಿನ ಭಾಗವತಿಕೆಯ ಬಗ್ಗೆ ಹೆಚ್ಚು ಜ್ಞಾನ ಹೊಂದಿದ್ದಾರೆ. ಪುತ್ತೂರು ಸಮೀಪದ ಪಾದೇಕಲ್ಲಿನ ಡಾ.ವಿಷ್ಣು ಭಟ್ಟ ಅವರು ಯಕ್ಷಲೋಕದ ಅಗ್ರಮಾನ್ಯ ಸಂಶೋಧಕರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT