ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣಾಭಿವೃದ್ಧಿಗೆ ಸರ್ಕಾರದ ಆದ್ಯತೆ

ಅಂಡಗಿ ಪಂಚಾಯ್ತಿ ಕಟ್ಟಡ ಉದ್ಘಾಟಿಸಿದ ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆ
Last Updated 25 ಅಕ್ಟೋಬರ್ 2019, 13:11 IST
ಅಕ್ಷರ ಗಾತ್ರ

ಶಿರಸಿ: ಕೇಂದ್ರ ಸರ್ಕಾರ ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡುತ್ತಿದೆ. ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಮಂಜೂರು ಆಗಿದೆ ಎಂದು ಸಂಸದ ಅನಂತಕುಮಾರ್ ಹೆಗಡೆ ಹೇಳಿದರು.

ತಾಲ್ಲೂಕಿನ ಅಂಡಗಿ ಗ್ರಾಮ ಪಂಚಾಯ್ತಿಯ ನೂತನ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ ಮಾತನಾಡಿ, ಮಹಾತ್ಮ ಗಾಂಧಿ ಕಲ್ಪನೆಯಂತೆ ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದರು.

ಅಂಡಗಿ ಪಂಚಾಯ್ತಿ ಸದಸ್ಯ ದೇವರಾಜ ನಾಯ್ಕ ಮಾಹಿತಿ ನೀಡಿ, ‘ಗ್ರಾಮ ಪಂಚಾಯ್ತಿಯಲ್ಲಿ ಏಳು ಗ್ರಾಮಗಳ 3500 ಜನಸಂಖ್ಯೆಯಿದೆ. ಪಂಚಾಯ್ತಿ ಸ್ವಂತ ಕಟ್ಟಡ ಹೊಂದಿದ್ದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ₹ 22 ಲಕ್ಷ ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದೆ’ ಎಂದರು.

ಪಂಚಾಯ್ತಿ ಅಧ್ಯಕ್ಷ ಬಸಪ್ಪ ಕುಪಗಡ್ಡಿ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಉಪಾಧ್ಯಕ್ಷ ಚಂದ್ರು ದೇವಾಡಿಗ, ಸದಸ್ಯೆ ಪ್ರೇಮಾ ಬೇಡರ, ಪಂಚಾಯ್ತಿ ಸದಸ್ಯ ಸಿ.ಬಿ.ಗೌಡ, ಬಸವೇಶ್ವರ ಪ್ರೌಢಶಾಲೆಯ ಅಧ್ಯಕ್ಷ ಸಿ.ಎಫ್.ನಾಯ್ಕ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಎಫ್.ಜಿ.ಚಿನ್ನಣ್ಣನವರ್, ಎಂಜಿನಿಯರ್ ರಾಮಚಂದ್ರ ಗಾಂವಕರ ಇದ್ದರು. ಪಿಡಿಒ ಪರಶುರಾಮ ಮಳವಳ್ಳಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT