ಸೋಮವಾರ, ಸೆಪ್ಟೆಂಬರ್ 20, 2021
21 °C

ಸ್ವಾತಂತ್ರ್ಯದ ಅಮೃತ ಮಹೋತ್ಸವ: ಅಂಜದೀವ್ ದ್ವೀಪದಲ್ಲಿ ಧ್ವಜಾರೋಹಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂಭ್ರಮಾಚರಣೆ ಅಂಗವಾಗಿ ಕಾರವಾರದ ಸೀಬರ್ಡ್ ನೌಕಾನೆಲೆಯಿಂದ ಅಂಜದೀವ್ ದ್ವೀಪದಲ್ಲಿ ಶುಕ್ರವಾರ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಯಿತು.

ದೇಶದ ಒಟ್ಟು 75 ದ್ವೀಪಗಳಲ್ಲಿ ಬೇರೆ ಬೇರೆ ದಿನಗಳಲ್ಲಿ ಧ್ವಜಾರೋಹಣ ಮಾಡಲಾಗುತ್ತಿದೆ. ಪೋರ್ಚುಗೀಸರ ಆಡಳಿತದಲ್ಲಿ ಗೋವಾದ ಭಾಗವಾಗಿದ್ದ ಅಂಜದೀವ್ ದ್ವೀಪವನ್ನು 1961ರ ಡಿಸೆಂಬರ್ 10ರಂದು ಭಾರತೀಯ ಸಶಸ್ತ್ರ ಪಡೆಗಳು ವಶಪಡಿಸಿಕೊಂಡು ದೇಶದ ಭಾಗವಾಗಿ ಸೇರಿಸಿದವು. ಸೀಬರ್ಡ್ ನೌಕಾನೆಲೆಯ ವ್ಯಾಪ್ತಿಯಲ್ಲಿರುವ ಕಾರಣ ದ್ವೀಪವು ಅತ್ಯಂತ ಮಹತ್ವವನ್ನೂ ಹೊಂದಿದೆ.

ಧ್ವಜಾರೋಹಣ ಸಂದರ್ಭದಲ್ಲಿ ನೌಕಾನೆಲೆಯ ಫ್ಲ್ಯಾಗ್ ಆಫೀಸರ್ ಕರ್ನಾಟಕ ರಿಯರ್ ಅಡ್ಮಿರಲ್ ಮಹೇಶ ಸಿಂಗ್ ಸೇರಿದಂತೆ ವಿವಿಧ ಹಿರಿಯ ಅಧಿಕಾರಿಗಳಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು