ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ: ಮಹಿಳಾ ಸಾಕ್ಷರರ ಪ್ರಮಾಣ ಹೆಚ್ಚಲಿ

Last Updated 14 ಸೆಪ್ಟೆಂಬರ್ 2022, 16:29 IST
ಅಕ್ಷರ ಗಾತ್ರ

ಕಾರವಾರ: ‘ಜಿಲ್ಲೆಯಲ್ಲಿ ಸಾಕ್ಷರತೆ ಪ್ರಮಾಣವು ಶೇ 86ರಷ್ಟಿದ್ದರೂ ಮಹಿಳಾ ಸಾಕ್ಷರತಾ ಪ್ರಮಾಣ ಕಡಿಮೆಯಿದೆ. ದೇಶದ ಪ್ರಗತಿಗೆ ಸಾಕ್ಷರತೆ ಅತಿ ಮುಖ್ಯವಾದ ಅಂಶವಾಗಿದೆ. ಮಹಿಳೆಯರಿಗೂ ವಿದ್ಯೆ ನೀಡಿ ಮುಖ್ಯವಾಹಿನಿಗೆ ತರುವ ಕಾರ್ಯವಾಗಬೇಕು’ ಎಂದು ಜಿಲ್ಲಾ ವಯಸ್ಕರ ಶಿಕ್ಷಣ ಅಧಿಕಾರಿ ಶ್ರೀಕಾಂತ ಹೆಗಡೆ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನಗರದಲ್ಲಿ ಬುಧವಾರ ನಡೆದ ‘ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.

‘ಕಂಪ್ಯೂಟರ್ ಸಾಕ್ಷರತೆಯೂ ಇಂದಿನ ದಿನಗಳಲ್ಲಿ ಅವಶ್ಯವಾಗಿದೆ. ಹಾಗಾಗಿ ಕಂಪ್ಯೂಟರ್ ಸಾಕ್ಷರತೆಯು ನಮ್ಮ ಯೋಜನೆಯಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ. ಔಪಚಾರಿಕ ಶಿಕ್ಷಣವನ್ನು ಪಡೆಯದ, 15 ವರ್ಷಕ್ಕಿಂತ ಮೇಲಿನ ವ್ಯಕ್ತಿಗಳನ್ನು ಗುರುತಿಸಿ ನವಸಾಕ್ಷರರನ್ನಾಗಿ ಮಾಡವುದೇ ಈ ದಿನಾಚರಣೆಯ ಉದ್ದೇಶವಾಗಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಸತೀಶ ಪವಾರ್ ಮಾತನಾಡಿ, ಎಲ್ಲರನ್ನೂ ಸಾಕ್ಷರರನ್ನಾಗಿ ಅವರ ಜೀವನಮಟ್ಟವನ್ನು ಸುಧಾರಿಸುವ ಹಾಗೂ ಸಾಕ್ಷರತೆಯ ಕುರಿತು ಅರಿವು ಮೂಡಿಸುವುದು ಈ ಯೋಜನೆಯ ಬಹುದೊಡ್ಡ ಉದ್ದೇಶವಾಗಿದೆ ಎಂದು ಹೇಳಿದರು.

ಕುಮಟಾ ಡಯೆಟ್‌ನ ಪ್ರಾಂಶುಪಾಲ ಎನ್.ಜಿ.ನಾಯ್ಕ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಸಾಕ್ಷರರು ನಿರಕ್ಷರರಿಗೆ ಕಲಿಸಬೇಕು. ವಿದ್ಯೆಯಿಲ್ಲದವರಿಗೆ ವಿದ್ಯೆ ನೀಡುವುದು ಸಂತಸದ ವಿಚಾರವಾಗಿದೆ’ ಎಂದರು.

ಜಿಲ್ಲಾ ಸಾಕ್ಷರತಾ ಸಂಯೋಜಕಿ ಸಾಧನಾ ಬರ್ಗಿ ಮಾತನಾಡಿದರು. ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯದರ್ಶಿ ನಾಗೇಶ ರಾಯ್ಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನರೇಂದ್ರ ನಾಯಕ, ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT