ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪರಿಹಾರ ಪ್ಯಾಕೇಜ್: ಪ್ರಸ್ತಾವ ಕಳುಹಿಸಿ’

ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ ಸಚಿವ ಜಗದೀಶ ಶೆಟ್ಟರ್
Last Updated 22 ಆಗಸ್ಟ್ 2019, 15:58 IST
ಅಕ್ಷರ ಗಾತ್ರ

ಕಾರವಾರ: ‘ಜಿಲ್ಲೆಯಲ್ಲಿ ಪ್ರವಾಹದಿಂದ ಆಗಿರುವ ಹಾನಿಗೆ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ವಿಶೇಷ ಪ್ಯಾಕೇಜ್ ಅಗತ್ಯವಿದೆ. ಈ ಬಗ್ಗೆಸರ್ಕಾರಕ್ಕೆ ಪ್ರಸ್ತಾವ ಕಳುಹಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಪ್ರವಾಸ ಮಾಡಿ ಅಲ್ಲಿನ ಜನರ ಸ್ಥಿತಿಗತಿಗಳನ್ನು ಅರಿತಿದ್ದೇನೆ. ಬಹಳಷ್ಟು ಹಾನಿಯಾಗಿದ್ದು, ಜೀವನ ಮೊದಲಿನಂತಾಗುವುದು ಮುಖ್ಯವಾಗಿದೆ. ಹಲವು ರಸ್ತೆಗಳು, ಸೇತುವೆಗಳ ಪುನರ್ ನಿರ್ಮಾಣ ಆಗಬೇಕಿದೆ. ಜನಸಾಮಾನ್ಯರಿಗೆ, ವಿದ್ಯಾರ್ಥಿಗಳಿಗೆ, ರೈತರಿಗೆ ಅನುಕೂಲ ಮಾಡಲು ಸರ್ಕಾರ ಸಿದ್ಧವಿದೆ. ಈ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಕೆಲಸ ಆಗಬೇಕು’ ಎಂದು ಅವರು ಹೇಳಿದರು.

‘ಜಿಲ್ಲೆಯಲ್ಲಿ ಉಂಟಾದ ನೆರೆ ಪರಿಸ್ಥಿತಿಯನ್ನು ಅಧಿಕಾರಿಗಳು, ಸ್ಥಳೀಯಜನಪ್ರತಿನಿಧಿಗಳು, ವಿವಿಧ ಸಂಘಟನೆಯವರು ಒಟ್ಟಾಗಿಸೇರಿ ಪರಿಣಾಮಕಾರಿಯಾಗಿ ನಿಭಾಯಿಸಿದ್ದಾರೆ. ಈ ಬಗ್ಗೆ ಜನರೂ ನನ್ನ ಬಳಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೀವ ಹಾನಿ ಕಡಿಮೆ ಮಾಡಿದ್ದು ಮುಖ್ಯವಾಗಿದೆ. ಜನಜೀವನ ಸುಗಮವಾಗುವಂತೆ ಕೆಲಸ ಆಗಬೇಕಿದೆ’ ಎಂದರು.

‘ನಿರ್ಲಕ್ಷ್ಯವಲ್ಲ’:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಿಲ್ಲೆಗೆ ಭೇಟಿ ನೀಡುವ ಕಾರ್ಯಕ್ರಮ ರದ್ದಾಯಿತು. ಆದರೆ, ಮುಂದಿನ ದಿನಾಂಕವನ್ನು ತಿಳಿಸಿಲ್ಲ. ಜಿಲ್ಲೆಯ ಬಗ್ಗೆ ನಿರ್ಲಕ್ಷ್ಯವೇ ಎಂದು ಪತ್ರಕರ್ತರು ಕೇಳಿದಾಗ, ‘ಖಂಡಿತ ಅಲ್ಲ. ಅವರು ಜಿಲ್ಲೆಯಲ್ಲಿ ಪರಿಹಾರ ಕಾಮಗಾರಿಗಳಿಗೆ ತಕ್ಷಣವೇ ಹಣ ಬಿಡುಗಡೆ ಮಾಡಿಸಿದ್ದಾರೆ. ಜಿಲ್ಲೆಯ ಭೇಟಿಕಾರಣಾಂತರಗಳಿಂದ ರದ್ದಾಯಿತು. ಅವರು ಎಲ್ಲ ಕಡೆ ಹೋಗಲು ಸಿದ್ಧರಿದ್ದಾರೆ. ನಾನು ಅವರಿಗೆ ಮನವರಿಕೆ ಮಾಡಿ ಕರೆದುಕೊಂಡು ಬರಲು ಯತ್ನಿಸುತ್ತೇನೆ’ ಎಂದು ಜಗದೀಶ ಶೆಟ್ಟರ್ ಪ್ರತಿಕ್ರಿಯಿಸಿದರು.

ಶಾಸಕ ದಿನಕರ ಶೆಟ್ಟಿ, ವಿಧಾನಪರಿಷತ್ ಸದಸ್ಯ ವಿ.ಎಸ್.ಸಂಕನೂರು, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೀಷ್ ಮೌದ್ಗೀಲ್, ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೊಹಮ್ಮದ್ ರೋಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT