ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಟಕಾ ಮಹಾಸತಿ ಜಾತ್ರೆಗೆ ಅದ್ಧೂರಿ ಚಾಲನೆ

Last Updated 15 ಜನವರಿ 2021, 14:08 IST
ಅಕ್ಷರ ಗಾತ್ರ

ಭಟ್ಕಳ: ತಾಲ್ಲೂಕಿನ ಹೆಬಳೆ ಗ್ರಾಮದಲ್ಲಿ ನಡೆಯುವ ಶೇಡಬರಿ ಜಟಕಾ ಮಹಾಸತಿ ದೇವಿಯ ಜಾತ್ರೆಯು ಶುಕ್ರವಾರ ಅದ್ಧೂರಿಯಾಗಿ ಪ್ರಾರಂಭಗೊಂಡಿತು.

ಮುಂಜಾನೆಯಿಂದಲೇ ನೂರಾರು ಭಕ್ತರು ಜಟಕಾ ದೇವಿಗೆ ಪೂಜೆ ಸಲ್ಲಿಸಿದರು. ಹರಕೆ ಹೊತ್ತ ಭಕ್ತರು ತಮ್ಮ ಇಷ್ಟಾರ್ಥ ನೆರವೇರಿದ ಅಂಗವಾಗಿ ಶೇಡಬರಿ ಮರ ಏರಿ, ಒಂದು ಸುತ್ತು ತಿರುಗಿಸಿದರು. ಮಕ್ಕಳು ಸೇರಿದಂತೆ ನೂರಾರು ಭಕ್ತರು ಈ ಹರಕೆಯನ್ನು ಅರ್ಪಿಸಿದರು.

ಈ ದೇವಸ್ಥಾನಕ್ಕೆ 100 ವರ್ಷಕ್ಕೂ ಹೆಚ್ಚಿನ ಇತಿಹಾಸವಿದೆ. ಜಾತ್ರೆಗೆ ಏಳು ದಿನಗಳ ಮೊದಲೇ ದೇವಸ್ಥಾನದ ಸುತ್ತಲಿನ 100ಕ್ಕೂ ಹೆಚ್ಚು ಗಡಿ ದೇವರಿಗೆ ಚರು ಹಾಕಲಾಗುತ್ತದೆ. ಈ ವಿಧಿವಿಧಾನಗಳನ್ನು ನೆರವೇರಿಸಿದ್ದ ಶೇಡಬರಿ ಆಡಳಿತ ಮಂಡಳಿಯವರು ಜಾತ್ರೆಗೆ ಅಣಿಗೊಳಿಸಿದರು. ತಾಲ್ಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆಗಳಿಂದ ಭಕ್ತರು ಇಲ್ಲಿ ಬಂದು ಪೂಜೆ ಸಲ್ಲಿಸುತ್ತಾರೆ.

ಜಾತ್ರೆಯ ಉತ್ಸವವನ್ನು ದೇವಸ್ಥಾನದ ಆಡಳಿತ ಮಂಡಳಿಯ ನೇತೃತ್ವದಲ್ಲಿ ಹಿರಿಯ ಟ್ರಸ್ಟಿಗಳು ಹಾಗೂ ಇತರ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದಾರೆ. ಶೇಡಬರಿ ಜಾತ್ರೆಯು ಜ.16ರಂದೂ ನಡೆಯಲಿದ್ದು, ಯಕ್ಷಗಾನ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT