ಬುಧವಾರ, ಅಕ್ಟೋಬರ್ 28, 2020
20 °C
ವಿವಿಧ ಸಂಘಟನೆಗಳಿಂದ ಪ್ರತಿಭಟನೆ: ಜಿಲ್ಲೆಯಲ್ಲಿ ಎಂದಿನಂತೆ ಸಾಗಿದ ಜನಜೀವನ

ಕಾರವಾರ: ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ಕೃಷಿ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಸಂಬಂಧಿಸಿದಂತೆ ಕೇಂದ್ರ, ರಾಜ್ಯ ಸರ್ಕಾರಗಳ ತಿದ್ದುಪಡಿ ಮಸೂದೆಯನ್ನು ವಿರೋಧಿ ಸೋಮವಾರ ಕರೆ ನೀಡಲಾಗಿದ್ದ ಕರ್ನಾಟಕ ಬಂದ್‌ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ನಗರದಲ್ಲಿ ಸಿ.ಐ.ಟಿ.ಯು, ಕರ್ನಾಟಕ ಪ್ರದೇಶ ರೈತ ಸಂಘ, ಎಸ್.ಎಫ್.ಐ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಆಟೊ ರಿಕ್ಷಾ ಸಂಘಟನೆಗಳು ಹಾಗೂ ಮಹಿಳಾ ಸಂಘಟನೆಗಳ ನೇತೃತ‌್ವದಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಯಿತು. ಜಿಲ್ಲಾ ರಂಗಮಂದಿರದಿಂದ ಹೊರಟು, ಲಂಡನ್ ಬ್ರಿಜ್ ಬಳಿಗೆ ಬಂದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ವಲ್ಪ ಹೊತ್ತು ವಾಹನ ಸಂಚಾರವನ್ನು ತಡೆದು ಪ್ರತಿಭಟನೆ ನಡೆಸಲಾಯಿತು.

ಬಳಿಕ ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿ ತಿದ್ದುಪಡಿ ಕಾಯ್ದೆಗಳ ವಿರುದ್ಧ ಘೋಷಣೆ ಕೂಗಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಿ.ಐ.ಟಿ.ಯು ರಾಜ್ಯ ಘಟಕದ ಕಾರ್ಯದರ್ಶಿ ಯಮುನಾ ಗಾಂವ್ಕರ್, ‘ಕಾಯ್ದೆಗಳಿಗೆ ತಿದ್ದುಪಡಿ ಮಾಡಿ ರೈತರಿಗೆ ಮೋಸ ಮಾಡಲಾಗಿದೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ರೈತರ ಸ್ವಾತಂತ್ರ್ಯ ಹರಣ ಮಾಡಿ, ಬಂಡವಾಳಶಾಹಿಗಳಿಗೆ ಸ್ವಾತಂತ್ರ್ಯ ಕೊಡಲಾಗಿದೆ’ ಎಂದು ದೂರಿದರು.

‘ತಿದ್ದುಪಡಿಯು ಇದು ಕರಾಳ ಶಾಸನವಾಗಿದೆ. ಸರ್ಕಾರವು ಬಂಡವಾಳಶಾಹಿಗಳ ಋಣ ತೀರಿಸಲು ಹೊರಟಿದ್ದರೆ, ನಾವು ರೈತರ ಋಣ ತೀರಿಸುತ್ತಿದ್ದೇವೆ’ ಎಂದರು.

ಪ್ರತಿಭಟನೆಯಲ್ಲಿ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ರಾಘು ನಾಯ್ಕ, ಮುಖಂಡರಾದ ಅಲ್ತಾಫ್ ಶೇಖ್, ಇಮ್ತಿಯಾಜ್ ಬುಖಾರಿ, ಶ್ಯಾಮಸುಂದರ ಗೋಕರ್ಣ, ದೇವಾನಂದ ಠಾಣೇಕರ್, ಶ್ಯಾಮನಾಥ ನಾಯ್ಕ, ಮಂಜುಳಾ ಕಾಣಕೋಣಕರ್, ತಾರಾ ನಾಯ್ಕ, ವಿಶಾಲ್, ರಮೇಶ ಮುದ್ಗೇಕರ್, ಪ್ರಶಾಂತ ಲಾಂಜೇಕರ್, ಘಾರು ಮಾಂಗ್ರೇಕರ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು