ಭಾನುವಾರ, ಜೂನ್ 20, 2021
23 °C

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಕರಾವಳಿಯಲ್ಲಿ ಮಳೆ ಶುರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ, ನಗರವೂ ಸೇರಿದಂತೆ ಜಿಲ್ಲೆಯ ಕರಾವಳಿಯ ವಿವಿಧೆಡೆ ಗುರುವಾರ ಮಳೆಯಾಗುತ್ತಿದೆ. ಗುಡುಗು, ಸಿಡಿಲಿನ ಅಬ್ಬರವಿಲ್ಲದೇ ಸಾಧಾರಣ ಪ್ರಮಾಣದಲ್ಲಿ ಹನಿಗಳು ಬೀಳುತ್ತಿವೆ.

ಸಮುದ್ರದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಮೇ 14ರ ನಂತರ ಚಂಡಮಾರುತವಾಗಿ ಪರಿವರ್ತನೆಯಾಗಬಹುದು. ಅದರ ಪರಿಣಾಮ ಮೇ 15ರಂದು ರಾಜ್ಯದ ಕರಾವಳಿಯಲ್ಲಿ ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಆಳಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿರುವ ಮೀನುಗಾರರು ಕೂಡಲೇ ದಡಕ್ಕೆ ಮರಳುವಂತೆ ಕೋಸ್ಟ್‌ಗಾರ್ಡ್ ಮತ್ತು ಮೀನುಗಾರಿಕಾ ಇಲಾಖೆಯಿಂದ ಈಗಾಗಲೇ ಸೂಚನೆ ನೀಡಲಾಗಿದೆ.

ಗುಜರಾತ್ ಭಾಗದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗಲಿದ್ದು, ಮ್ಯಾನ್ಮಾರ್ ದೇಶವು ಅದಕ್ಕೆ 'ತೌಕ್ತೆ' (ಹಲ್ಲಿ) ಎಂದು ಹೆಸರಿಟ್ಟಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು