ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಮ್ಮ ತಟ್ಟೆಯಲ್ಲಿ ಕತ್ತೆ ಬಿದ್ದಿದೆ: ಡಿಕೆಶಿ ವಿರುದ್ಧ ಶ್ರೀರಾಮುಲು ವಾಗ್ದಾಳಿ

Last Updated 18 ನವೆಂಬರ್ 2021, 11:01 IST
ಅಕ್ಷರ ಗಾತ್ರ

ಕಾರವಾರ: ‘ಡಿ.ಕೆ.ಶಿವಕುಮಾರ್ ಅವರು ಬಿಜೆಪಿಯವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ಎಂದು ಟೀಕಿಸುತ್ತಾರೆ. ನಿಮ್ಮ ತಟ್ಟೆಯಲ್ಲಿ ಕತ್ತೆ ಬಿದ್ದಿದೆ. ಮೊದಲು ಅದನ್ನು ತೆಗೆಯಿರಿ‘ ಎಂದು ಸಾರಿಗೆ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದರು.

ಯಲ್ಲಾಪುರದಲ್ಲಿ ಬಿ.ಜೆ.ಪಿ.ಯು ಗುರುವಾರ ಹಮ್ಮಿಕೊಂಡ 'ಜನ ಸ್ವರಾಜ್ ಸಮಾವೇಶದಲ್ಲಿ ಅವರು ಮಾತನಾಡಿದರು.

'ಸಿದ್ದರಾಮಯ್ಯ ಅವರು ಎಲ್ಲರನ್ನೂ ಏಕವಚನದಲ್ಲಿ ಹೇಗೆ ಬೇಕೋ ಹಾಗೆ ಮಾತಾಡಿಸ್ತಾರೆ. ಹಾನಗಲ್ ವಿಧಾನಸಭೆ ಕ್ಷೇತ್ರದಲ್ಲಿ ಬಿ.ಜೆ.ಪಿ ಅಭ್ಯರ್ಥಿ ಸೋತಾಗ ಆಡಳಿತ ವಿರೋಧಿ ಅಲೆಯಿದೆ, ಕಾಂಗ್ರೆಸ್ ಗೆಲುವಿನ ಸುನಾಮಿ ಆಗ್ತದೆ ಎಂದರು. ಎಂಥ ಸುನಾಮಿ, ಬಿರುಗಾಳಿ ಬೀಸಿದರೂ ಎದುರಿಸುವ ಶಕ್ತಿ ಬಿಜೆಪಿಗಿದೆ. ಆ ಅಲೆಯಲ್ಲಿ ಕಾಂಗ್ರೆಸ್ ಒಡೆದು ಹೋಗುತ್ತದೆ' ಎಂದು ಹೇಳಿದರು.

'ಕಳೆದ ಬಾರಿ ಚುನಾವಣೆಯಲ್ಲಿ ಬಾದಾಮಿಯಲ್ಲಿ ಸಿದ್ದರಾಮಯ್ಯ ಅವರು 1,600 ಮತಗಳಿಂದ ಗೆದ್ದರು. ಅದೂ ಎಣಿಕೆ ಸಂದರ್ಭದಲ್ಲಿ ಮೋಸದಿಂದ ಗೆದ್ದುಕೊಂಡರು. ಮುಖ್ಯಮಂತ್ರಿಯಾಗಿದ್ದವರು ಅಷ್ಟು ಅಂತರದಲ್ಲಿ ಗೆಲ್ಲುವುದು ದೊಡ್ಡ ವಿಚಾರವಲ್ಲ. ಮುಂದೆ ಅವರು ಎಲ್ಲಿ ಸ್ಪರ್ಧಿಸುತ್ತಾರೋ ಅಲ್ಲಿ ಕಾಂಗ್ರೆಸಿಗರೇ ಸುನಾಮಿ ರೀತಿಯಲ್ಲಿ ಕೆಲಸ ಮಾಡಿ ಅವರನ್ನು ಸೋಲಿಸುತ್ತಾರೆ. ಕಾಂಗ್ರೆಸ್‌ನಲ್ಲಿ ಗುಂಪುಗಳಿವೆ. ಕೇಂದ್ರದಲ್ಲಿ ಮೋದಿ ಅಧಿಕಾರದಲ್ಲಿ ಇರುವ ತನಕ ಕಾಂಗ್ರೆಸ್‌ಗೆ ಗೆಲುವು ಸಾಧ್ಯವಿಲ್ಲ. ರಾಜ್ಯದಲ್ಲಿ 2023ರ ವಿಧಾನಸಭೆ ಚುನಾವಣೆಯಲ್ಲಿ 150ಕ್ಕೂ ಅಧಿಕ ಸ್ಥಾನಗಳನ್ನು ಬಿಜೆಪಿ ಜಯಿಸಲಿದೆ' ಎಂದು ವಿಶ್ವ‌ಾಸ ವ್ಯಕ್ತಪಡಿಸಿದರು.

'ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದಾಗ ಮುಸ್ಲಿಮ್ ನಾಯಕರನ್ನು ರಾಷ್ಟ್ರಪತಿ ಮಾಡಿದ್ದೀರಾ? ಅಬ್ದುಲ್ ಕಲಾಂರನ್ನು ರಾಷ್ಟ್ರಪತಿ ಮಾಡಿದ್ದು ಬಿಜೆಪಿ ನಂತರ ಪರಿಶಿಷ್ಟ ಜಾತಿ ಸಮುದಾಯದವರು ಅದೇ ಹುದ್ದೆಯಲ್ಲಿದ್ದಾರೆ. ಬಿಜೆಪಿ ಅಧಿಕಾರದಲ್ಲಿದೆ ಎಂದು ಕಾಂಗ್ರೆಸ್‌ನವರು ಏನು ಬೇಕಾದರೂ ಹೇಳುವುದು ಶೋಭೆ ತರುವುದಿಲ್ಲ' ಎಂದರು.

'ರಾಹುಲ್ ಗಾಂಧಿ ಪಾರ್ಟ್ ಟೈಂ ನಾಯಕ. ದೇಶಕ್ಕೆ ಅವರು ಬೇಕಾ ಅಥವಾ ಫುಲ್ ಟೈಂ ನಾಯಕ ಮೋದಿ ಬೇಕಾ ಎಂದು ಯೋಚಿಸಬೇಕು' ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT