ಶುಕ್ರವಾರ, ಮೇ 27, 2022
21 °C

ಸಿದ್ದರಾಮಯ್ಯ, ಡಿಕೆಶಿ ಸರ್ಕಾರವನ್ನು ಹೊಗಳುವ ನಿರೀಕ್ಷೆ ಯಾಕೆ: ಶ್ರೀನಿವಾಸ ಪೂಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ‘ಸರ್ಕಾರದ ಬಗ್ಗೆ ಟೀಕೆ ಮಾಡುವುದು ವಿರೋಧ ಪಕ್ಷದ ಕೆಲಸ. ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಹೇಳ್ತಾರೆ ಅಂತ ಯಾಕೆ ನಿರೀಕ್ಷಿಸ್ತೀರಿ’ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ವಿರೋಧ ಪಕ್ಷಗಳ ನಾಯಕರ ಟೀಕೆ ಕುರಿತು ಪ್ರತಿಕ್ರಿಯಿಸಿದರು.

'ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆಯು ಸಹಜ ಪ್ರಕ್ರಿಯೆ. ಮುಖ್ಯಮಂತ್ರಿ ತಮ್ಮ ವಿವೇಚನೆಯಂತೆ ಜಿಲ್ಲೆಗಳ ಉಸ್ತುವಾರಿ ನೀಡಿದ್ದಾರೆ. ಉಸ್ತುವಾರಿ ಸಚಿವರು ತವರು ಜಿಲ್ಲೆಯವರೇ ಆಗಬೇಕು ಎಂದಿಲ್ಲ. ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯಕರು ಇರುತ್ತಾರೆ. ವಾರಕ್ಕೊಮ್ಮೆ ಭೇಟಿ ನೀಡಲು ಪ್ರಯತ್ನಿಸುವೆ. ಮೂರು ತಿಂಗಳಿಗೊಮ್ಮೆ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಂಡು ಜಿಲ್ಲೆಯ ಅಭಿವೃದ್ಧಿಯನ್ನು ನೋಡಿಕೊಳ್ಳಲಾಗುವುದು' ಎಂದರು.

ಓದಿ... ಮೊದಲು ಕಾಂಗ್ರೆಸ್‌ನಿಂದ ಬೇರೆ ಪಕ್ಷಕ್ಕೆ ಬರುವವರನ್ನು ತಡೆಯಲಿ: ಶ್ರೀನಿವಾಸ ಪೂಜಾರಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು