ಬುಧವಾರ, ಸೆಪ್ಟೆಂಬರ್ 22, 2021
29 °C

ಶಿರಸಿ: ದಾಖಲೆಯ 24 ಸೆಂ.ಮೀ ಮಳೆ, ಉಕ್ಕಿದ ನದಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಸಿ: ಕಳೆದ ಇಪ್ಪತ್ನಾಲ್ಕು ತಾಸುಗಳ ಅವಧಿಯಲ್ಲಿ ತಾಲ್ಲೂಕಿನಲ್ಲಿ 24 ಸೆಂ.ಮೀ. ಮಳೆ ಸುರಿದಿದೆ. ನದಿ, ಕೊಳ್ಳಗಳು ಭರ್ತಿಯಾಗಿದ್ದು ಹಲವೆಡೆ ತೋಟ, ಗದ್ದೆಗಳು ಜಲಾವೃತಗೊಂಡಿವೆ.

ಮಾದ್ನಕಳ್, ಮಾರಿಗದ್ದೆ, ಸರಕುಳಿ ಸೇತುವೆಗಳ ಮೇಲೆ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಶಿರಸಿ ಹಾಗೂ ಸಿದ್ದಾಪುರ ತಾಲ್ಲೂಕುಗಳ ನಡುವಿನ ಸಂಪರ್ಕ ಸ್ಥಗಿತಗೊಂಡಿದೆ. ಪಟ್ಟಣಹೊಳೆ, ಕೆಂಗ್ರೆ ಹೊಳೆಯೂ ಭರ್ತಿಯಾಗಿದ್ದು ಸೇತುವೆಗಳು ಸಂಪೂರ್ಣ ಮುಚ್ಚಿವೆ. ಸಂಚಾರ ಸ್ಥಗಿತಗೊಂಡಿದೆ.

ಕಕ್ಕಳ್ಳಿ-ವಾನಳ್ಳಿ ನಡುವಿನ ರಸ್ತೆಯಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಹಲವೆಡೆ ಮರಗಳು ರಸ್ತೆಗೆ ಉರುಳಿ ಬಿದ್ದಿವೆ. ನೂರಾರು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಗ್ರಾಮೀಣ ಭಾಗದ ಬಹುತೇಕ ಕಡೆಗಳಲ್ಲಿ ವಿದ್ಯುತ್, ದೂರವಾಣಿ ಸಂಪರ್ಕ ಕಡಿತಗೊಂಡಿದೆ.

ಶಿವಳ್ಳಿ ಗ್ರಾಮ ಪಂಚಾಯ್ತಿಯ ಚಿಂಚಳಿಕೆ ಗ್ರಾಮದಲ್ಲಿ ಕೆರೆ ಒಡ್ಡು ಒಡೆದ ಪರಿಣಾಮ 60 ಎಕರೆಗೂ ಹೆಚ್ಚು ಭತ್ತದ ಗದ್ದೆ ಮುಳುಗಡೆಯಾಗಿದೆ. ನಾಟಿಗೆ ಸಿದ್ಧಪಡಿಸಿಟ್ಟುಕೊಂಡಿದ್ದ ಭತ್ತದ ಸಸಿಗಳು ತೇಲಿಹೋಗಿವೆ.

ಶಿರಸಿ ನಗರದ ತಗ್ಗು ಪ್ರದೇಶಗಳೆಲ್ಲ ಜಲಾವೃತಗೊಂಡಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು