ಗುರುವಾರ , ಮೇ 19, 2022
24 °C

ಪರ್ಸಂಟೇಜ್‌ಗೆ ಜನ್ಮ ನೀಡಿದ್ದು ಕಾಂಗ್ರೆಸ್: ಸಚಿವ ಶ್ರೀರಾಮುಲು ವಾಗ್ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಶಿರಸಿ: ಅರವತ್ತು ವರ್ಷ ಅಧಿಕಾರದಲ್ಲಿದ್ದು ಭ್ರಷ್ಟಾಚಾರ ಪರಿಚಯಿಸಿದ್ದು ಕಾಂಗ್ರೆಸ್ ಪಕ್ಷ. ಅವರೇ ಪರ್ಸಂಟೇಜ್ ವ್ಯವಹಾರಕ್ಕೆ ಜನ್ಮ ನೀಡಿದವರು ಎಂದು ಸಾರಿಗೆ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದರು.

ಬುಧವಾರ ಶಿರಸಿಯಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, 'ಪಿಎಸ್ಐ ನೇಮಕಾತಿ ಸೇರಿದಂತೆ ವಿವಿಧ ಹುದ್ದೆ ನೇಮಕಾತಿ ಹಗರಣವನ್ನು ನಾವೇ ಪತ್ತೆ ಹಚ್ಚಿದ್ದೇವೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ' ಎಂದರು.

'ಸಚಿವ ಅಶ್ವತ್ಥ ನಾರಾಯಣ ಅವರ ಮೇಲೆ ಕಾಂಗ್ರೆಸ್ ನಾಯಕ ಡಿ.ಕೆ‌.ಶಿವಕುಮಾರ್ ನಿರಾಧಾರ ಆರೋಪ ಹೊರಿಸುತ್ತಿದ್ದಾರೆ. ಭ್ರಷ್ಟಾಚಾರದಲ್ಲಿ ಮುಳುಗಿದ್ದ ಕಾಂಗ್ರೆಸ್ ನಾಯಕರು ತಾವು ಮಾಡಿದ ತಪ್ಪನ್ನು ಬಿಜೆಪಿ ನಾಯಕರ ಮೇಲೆ ಹೊರಿಸುವ ಕೆಲಸ ಮಾಡುತ್ತಿದ್ದಾರೆ' ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು